ನಾನು ಗಂಡು ಆದ್ರೆ ಅಷ್ಟೇನು ಕೆಟ್ಟದಾಗಿ ಕಾಣಲ್ಲ – ‘ರಣಧೀರ’ ನಟಿ

Public TV
1 Min Read
KHUSHBOO

ಹೈದರಾಬಾದ್: ನಟಿ ಖುಷ್ಬೂ ನಟನೆ ಜೊತೆಗೆ ರಾಜಕೀಯದಲ್ಲಿಯೂ ಬ್ಯುಸಿಯಾಗಿದ್ದಾರೆ. ಅಲ್ಲದೇ ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಇದೀಗ ಖುಷ್ಬೂ ರೂಪಾಂತರದ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸಕ್ರೀಯರಾಗಿರುವ ಖುಷ್ಬೂ ಇತ್ತೀಚಿಗೆ ಒಂದು ಫೋಟೋವನ್ನು ಹಂಚಿಕೊಂಡಿದ್ದಾರೆ. ಆ ಫೋಟೋ ನೋಡಿ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಯಾಕೆಂದರೆ ಆ ಫೋಟೋದಲ್ಲಿ ನಟಿ ಖುಷ್ಬೂ ಪುರುಷ ಅವತಾರತಾಳಿದ್ದಾರೆ.

Khushboo

ಹೌದು..ಫೇಸ್ ಆಪ್ ಮೂಲಕ ನಟಿ ಖುಷ್ಬೂ ತಮ್ಮ ಫೋಟೋವನ್ನು ಎಡಿಟ್ ಮಾಡಿ ಟ್ವಿಟ್ಟರಿನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೇ ಆ ಫೋಟೋಗೆ, “ನಾನು ಪುರುಷನಾಗಿದ್ದರೆ ಅಷ್ಟೇನು ಕೆಟ್ಟದಾಗಿ ಕಾಣುವುದಿಲ್ಲ” ಎಂದು ಬರೆದುಕೊಂಡಿದ್ದಾರೆ. ಜೊತೆಗೆ ನಗುವ ಎಮೋಜಿಯನ್ನು ಹಾಕಿಕೊಂಡಿದ್ದಾರೆ.

ನಟಿ ಖುಷ್ಬೂ ಫೋಟೋ ಶೇರ್ ಮಾಡಿದ ತಕ್ಷಣ ಅಭಿಮಾನಿಗಳು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಫೋಟೋ ನೋಡಿ ಅಚ್ಚರಿ ಪಟ್ಟಿದ್ದಾರೆ. ಇನ್ನೂ ಕೆಲವರು ಪುರುಷ ಖುಷ್ಬೂ ಸುಂದರವಾಗಿ ಕಾಣಿಸುತ್ತಾರೆ ಎಂದು ಹೇಳುತ್ತಿದ್ದಾರೆ.

Khushboo 1

90ರ ದಶಕದ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿದ್ದ ಖುಷ್ಬೂ ರವಿಚಂದ್ರನ್ ಅಭಿನಯದ ‘ರಣಧೀರ’ ಸಿನಿಮಾ ಮೂಲಕ ಕನ್ನಡ ಸಿನಿಪ್ರಿಯರಿಗೆ ಪರಿಚಿತರಾಗಿದ್ದಾರೆ. ಅಲ್ಲದೇ ದಕ್ಷಿಣ ಭಾರತೀಯ ಎಲ್ಲಾ ಭಾಷೆಯಲ್ಲಿಯೂ ಅಭಿನಯಿಸಿದ್ದಾರೆ. ಕನ್ನಡದಲ್ಲಿ ಕೊನೆಯದಾಗಿ 2005ರಲ್ಲಿ ರಿಲೀಸ್ ಆದ ‘ಮ್ಯಾಜಿಕ್ ಅಜ್ಜಿ’ ಸಿನಿಮಾದಲ್ಲಿ ನಟಿಸಿದ್ದರು. ಬಳಿಕ ಕನ್ನಡ ಸಿನಿಮಾದಲ್ಲಿ ಅಭಿನಯಿಸಿಲ್ಲ.

Share This Article
Leave a Comment

Leave a Reply

Your email address will not be published. Required fields are marked *