ಜೈಪುರ: ರಾಜಸ್ಥಾನ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಂಡಾಯ ಹೂಡಿರುವ ಮಾಜಿ ಡಿಸಿಎಂ ಸಚಿನ್ ಪೈಲಟ್, ತಾನು ಈಗಲೂ ಕಾಂಗ್ರೆಸ್ ಪಕ್ಷದ ಸದಸ್ಯನಾಗಿದ್ದು, ಬಿಜೆಪಿ ಪಕ್ಷ ಸೇರ್ಪಡೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ವಿರುದ್ಧ ಅಸಮಾಧಾನ ಹೊಂದಿರುವ ಸಚಿನ್ ಅವರು ಬಿಜೆಪಿ ಸೇರ್ಪಡೆಯಾಗುತ್ತಾರಾ? ಅವರ ಮುಂದಿನ ನಡೆ ಏನು? ಎಂಬ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಇದರ ನಡುವೆಯೇ ಇಂದು ಸಚಿನ್ ಪೈಲಟ್ ಅವರ ಸುದ್ದಿಗೋಷ್ಠಿ ನಿಗದಿಯಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಸುದ್ದಿಗೋಷ್ಠಿ ಮುಂದೂಡಲಾಗುತ್ತಿದೆ ಎಂದು ಅವರ ಪೈಲಟ್ ಅವರ ಬೆಂಬಲಿಗರು ಹೇಳಿದ್ದಾರೆ. ಅಲ್ಲದೇ ಶೀಘ್ರವೇ ಸುದ್ದಿಗೋಷ್ಠಿ ನಡೆಸಲಾಗುವುದು ಎಂದಿದ್ದಾರೆ. ಇದನ್ನು ಓದಿ: ‘ಈ ಯುವಕರಿಗೆ ತಾಳ್ಮೆಯೇ ಇಲ್ಲ’- ಪೈಲಟ್ ವಿರುದ್ಧ ಗುಡುಗಿದ ದಿಗ್ವಿಜಯ್ ಸಿಂಗ್
Advertisement
I’m not joining BJP: Sachin Pilot to ANI pic.twitter.com/DhbVJs2X4b
— ANI (@ANI) July 15, 2020
Advertisement
ಇದೇ ವೇಳೆ ರಾಷ್ಟ್ರೀಯ ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿರುವ ಪೈಲಟ್ ಅವರು, ತಾವು ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ನಾನು ಬಿಜೆಪಿ ಪಕ್ಷಕ್ಕೆ ಸೋಲುಣಿಸಲು ಕಾರ್ಯನಿರ್ವಹಿಸಿದ್ದೆ. ಆತಂಕ ಪಕ್ಷಕ್ಕೆ ನಾನು ಏಕೆ ಸೇರ್ಪಡೆಯಾಗುತ್ತೇನೆ? ಈಗಲೂ ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ. ಕೆಲವರು ಬಿಜೆಪಿ ಸೇರುತ್ತಿರುವ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಪಕ್ಷದ ವರಿಷ್ಠರಿಗೆ ನನ್ನ ಮೇಲಿನ ನಂಬಿಕೆ ಕಡಿಮೆ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಪೈಲಟ್ ತಿಳಿಸಿದ್ದಾರೆ.