ಬೆಂಗಳೂರು: ನಾಯಕತ್ವ ಬದಲಾವಣೆ ಮತ್ತು ಸಿಎಂ ರೇಸ್ ನಲ್ಲಿ ಮುರುಗೇಶ್ ನಿರಾಣಿ ಹೆಸರು ಕೇಳಿ ಬಂದ ವಿಚಾರಕ್ಕೆ ಸಂಬಂಧಿಸಿದ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಸರ್ಕಾರಿ ವಸತಿ ಗೃಹದಲ್ಲಿ ಸಚಿವ ಶಿವರಾಂ ಹೆಬ್ಬಾರ್ ಭೇಟಿ ಬಳಿಕ ಮಾತನಾಡಿದ ಮುರುಗೇಶ್ ನಿರಾಣಿ, ಸಿಎಂ ರೇಸ್ ನಲ್ಲಿ ನಾನಿಲ್ಲ. ನಾನು ಸಿಎಂ ಆಕಾಂಕ್ಷಿ ಅಲ್ಲ. ಮಾಧ್ಯಮದವರೇ ನನ್ನ ಹೆಸರನ್ನ ಹೇಳುತ್ತಿರುವುದು. ನಾನು ಪಕ್ಷದ ಶಿಸ್ತಿನ ಸಿಪಾಯಿ ಹೈಕಮಾಂಡ್ ನನಗೆ ಕೊಟ್ಟ ಜವಾಬ್ದಾರಿಯನ್ನ ಅಚ್ಚುಕಟ್ಟಾಗಿ ನಿರ್ವಹಿಸಲಿದ್ದೇನೆ. ಅಲ್ಲದೆ ಯಡಿಯೂರಪ್ಪನವರೆ ಮುಂದಿನ ಎರಡು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ಎಂದರು. ಇದನ್ನೂ ಓದಿ: ಯಡಿಯೂರಪ್ಪಗೆ ವಯಸ್ಸಾಗಿದೆ, ಸ್ಪಿರಿಟ್ ಇಲ್ಲ: ಹೆಚ್. ವಿಶ್ವನಾಥ್
ಈಗಾಗಲೇ ರಾಷ್ಟ್ರೀಯ ನಾಯಕರು ಯಡಿಯೂರಪ್ಪ ಎರಡು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಅಂತ ಹೇಳಿದ್ದಾರೆ. ನಾನು ಅದನ್ನೇ ಹೇಳಿದ್ದೇನೆ. ನಾನು ಪರ – ವಿರೋಧದ ಹೇಳಿಕೆ ನೀಡಲ್ಲ. ಸಚಿವನಾಗಿ ಕೆಲಸ ಮಾಡ್ತಾ ಇದ್ದೇವೆ. ಅರುಣ್ ಸಿಂಗ್ ಸಹ ಕೆಲವು ಸೂಚನೆ ಕೊಟ್ಟಿದ್ದಾರೆ. ಅವರ ಭೇಟಿ ವೇಳೆಯೂ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಿಲ್ಲ. ಪಕ್ಷವನ್ನ ಮುಂದೆ ಅಧಿಕಾರಕ್ಕೆ ತರಲು ಎಫೆಕ್ಟ್ ಆಗಿ ಕೆಲಸ ಮಾಡಿ. ಜನರ ಕೆಲಸ, ಜಿಲ್ಲೆ ಜವಬ್ದಾರಿ ಅಚ್ಚುಕಟ್ಟಾಗಿ ಮಾಡಿ ಅಂತ ಹೇಳಿದ್ದಾರೆ. ಅದರಂತೆ ನಾವೆಲ್ಲ ನಡೆದುಕೊಳ್ಳುತ್ತೇವೆ. ಮುಂದಿನ ದಿನಗಳಲ್ಲೂ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದರು. ಇದನ್ನೂ ಓದಿ: ಸಿಎಂ ವಿರುದ್ಧ ಸಿಪಿವೈ, ಬೆಲ್ಲದ್, ಯತ್ನಾಳ್ ಚಾರ್ಜ್‍ಶೀಟ್ ಏನು?