ಮಡಿಕೇರಿ: ನಾನು ಐದು ಬಾರಿ ಶಾಸಕನಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಎಂಎಲ್‍ಎ ಅಪ್ಪಚ್ಚು ರಂಜನ್ ಹೇಳಿದ್ದಾರೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾರಂಗಿ ಜಲಾಶಯ ವೀಕ್ಷಣೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕರು, ಸಚಿವ ಸ್ಥಾನದ ಆಕಾಂಕ್ಷಿಯಲ್ಲಿ ನಾನೂ ಒಬ್ಬನಾಗಿದ್ದು, ಇದರಲ್ಲಿ ಅನುಮಾನವೇ ಇಲ್ಲ. ಕಾಯ್ದು ನೋಡುತ್ತೇವೆ. ಯಾರನ್ನು ಸಚಿವರನ್ನಾಗಿ ನೇಮಿಸಬೇಕು ಎನ್ನುವ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ನಾನು ಐದು ಬಾರಿ ಗೆದ್ದಿದೇನೆ ಎಂದರು.
ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬುದನ್ನು ಅವರನ್ನೇ ಕೇಳಿ. ಯೋಗೇಶ್ವರ್ ಯಾರ ಜೊತೆ ಹೇಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.