ನಾನು 5ಜಿ ವಿರೋಧಿ ಅಲ್ಲ, ಅದರ ಸಮಸ್ಯೆಗಳನ್ನು ತಡೆಯಬೇಕು: ಜೂಹಿ ಚಾವ್ಲಾ

Public TV
2 Min Read
juhi chawla

ಮುಂಬೈ: ಭಾರತದಲ್ಲಿ 5ಜಿ ನೆಟ್‍ವರ್ಕ್ ಸ್ಥಾಪನೆಯ ವಿರುದ್ಧ ನಟಿ, ಪರಿಸರವಾದಿ ಜೂಹಿ ಚಾವ್ಲಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಮತ್ತೆ ಜೂಹಿ ಚಾವ್ಲಾ ಈ ಕುರಿತು ಮಾತನಾಡಿದ್ದಾರೆ. ನಾನು 5ಜಿ ವಿರೋಧಿಯಲ್ಲ ಆದರೆ ಇದರಿಂದ ಆಗಬಹುದಾದ ಸಮಸ್ಯೆಗಳನ್ನು ತಡೆಯಬೇಕೆಂದು ಹೇಳಿಕೊಂಡಿದ್ದಾರೆ.

5g internet medium

ಈ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಮಾತನಾಡಿದ ಜೂಹಿ ಚಾವ್ಲಾ, ನಾನು 5ಜಿ ತಂತ್ರಜ್ಞಾನದ ವಿರೋಧಿಯಲ್ಲ. ಆದರೆ ಇದರಿಂದ ಆಗಬಹುದಾದ ಸಮಸ್ಯೆಗಳನ್ನು ತಡೆಯಬೇಕು. ಮತ್ತು ಪ್ರತೀಯೊಬ್ಬರಿಗೂ ಇದು ಸುರಕ್ಷಿತ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. 5ಜಿ ವಿಕಿರಣದಿಂದ ಮನುಷ್ಯರ ಮೇಲೆ ಹಲವು ದುಷ್ಪರಿಣಾಮಗಳಿವೆ ಎಂದು ಮತ್ತೆ ಒತ್ತಿ ಹೇಳಿದ್ದಾರೆ. ಇದನ್ನೂ ಓದಿ 5ಜಿ ನೆಟ್‍ವರ್ಕ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಜೂಹಿ ಚಾವ್ಲಾ

iamjuhichawla 32276207 2081253998867025 6452801888197804032 n

ಅರ್ಜಿ ವಜಾಗೊಳಿಸಿದ್ದು ಏಕೆ?:
5ಜಿ ತಂತ್ರಜ್ಞಾನ ಜೀವ ಸಂಕುಲಕ್ಕೆ ಅಪಾಯ ತಂದೊಡ್ಡುತ್ತದೆ ಎಂದು ಆರೋಪಿಸಿ ದೆಹಲಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ಜೂಹಿ ಚಾವ್ಲಾ 5ಜಿ ತಂತ್ರಜ್ಞಾನ ಜಾರಿಗೆ ತಡೆ ನೀಡಬೇಕು ಎಂದು ಕೋರಿದ್ದರು. ಆದರೆ ಜೂಹಿ ಚಾವ್ಲಾ ಅವರ ಈ ಅರ್ಜಿಯನ್ನು ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಿದ್ದೀರಿ ಎಂದು ಕೋರ್ಟ್ ಅರ್ಜಿಯನ್ನು ವಜಾಗೊಳಿಸಿ 20 ಲಕ್ಷ ರೂ ದಂಡ ವಿಧಿಸಿತ್ತು. ಅದಲ್ಲದೇ ವೀಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಅರ್ಜಿದಾರರ ವಿಚಾರಣೆ ನಡೆಸಿದ್ದು, ಈ ವಿಚಾರಣೆಯ ಲಿಂಕ್‍ನ್ನು ಜೂಹಿ ಚಾವ್ಲಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದರಿಂದಾಗಿ ಮೂರು ಬಾರಿ ವಿಚಾರಣೆಗೆ ಅಡ್ಡಿಯಾಗಿತ್ತು. ಅದಲ್ಲದೇ ಅಭಿಮಾಯೋರ್ವ ನಟಿಯ ಹಾಡು ಹಾಡಿ ವಿಚಾರಣೆಗೆ ಅಡ್ಡಿ ಪಡಿಸಿದ್ದು, ಆತನ ವಿರುದ್ಧವು ಕಾನೂನು ಕ್ರಮ ಕೈಗೊಳ್ಳುವಂತೆ ಕೋರ್ಟ್ ಸೂಚಿಸಿತ್ತು.

ಈ ಎಲ್ಲಾ ಬೆಳವಣಿಗೆಯಿಂದ ಜೂಹಿ ಚಾವ್ಲಾ ತೀವ್ರ ಮುಜುಗರಕ್ಕೊಳಗಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಜೂಹಿ ಚಾವ್ಲಾ ವಿರುದ್ಧ ವ್ಯಾಪಕ ಟೀಕೆ ಮತ್ತು ಟ್ರೋಲ್‍ಗಳು ಹರಿದಾಡುತ್ತಿತ್ತು. ಈ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಹೇಳುವ ಮೂಲಕ ಮತ್ತೆ 5ಜಿ ವಿರುದ್ಧ ಸಮರ ಸಾರಿದ್ದಾರೆ. ಇದನ್ನೂ ಓದಿ: 5ಜಿ ವಿರುದ್ಧ ಜೂಹಿ ಚಾವ್ಲಾ ಸಲ್ಲಿಸಿದ್ದ ಅರ್ಜಿ ವಜಾ- 20 ಲಕ್ಷ ದಂಡ ವಿಧಿಸಿದ ದೆಹಲಿ ಹೈ ಕೋರ್ಟ್

ದೂರಿನಲ್ಲಿ ಏನಿದೆ?
ಭಾರತದಲ್ಲಿ 5ಜಿಯನ್ನು ಜಾರಿಗೆ ತಂದರೆ ದೇಶದಲ್ಲಿರುವ ಯಾವುದೇ ವ್ಯಕ್ತಿ, ಪ್ರಾಣಿ, ಪಕ್ಷಿ, ಕೀಟ, ಸಸ್ಯ ಪ್ರಭೇದಗಳು 5ಜಿಯ ವಿಕಿರಣದಿಂದಾಗುವ ತೊಂದರೆಗಳನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ದಿನದ 24 ಗಂಟೆ, ವರ್ಷದ 365 ದಿನ, ಈಗಿರುವ ನೆಟ್‍ವರ್ಕ್ ವಿಕಿರಣಗಳಿಂದ ರೇಡಿಯೋ ಫ್ರಿಕ್ವೆನ್ಸಿ ವಿಕಿರಣ 10x ರಿಂದ 100x ಪಟ್ಟು ಹೆಚ್ಚಾಗಿರುತ್ತದೆ.

deli high court medium

5ಜಿ ಯೋಜನೆಗಳಿಂದಾಗಿ ಮನುಷ್ಯರ ಮೇಲೆ ಹಲವು ದುಷ್ಪರಿಣಾಮಗಳಿದ್ದು, ಮುಂದೆ ಬದಲಾಯಿಸಲು ಸಾಧ್ಯವಾಗದ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಮನುಷ್ಯರ ಮೇಲೆ ಮಾತ್ರವಲ್ಲದೇ ಭೂಮಿಯ ಮೇಲಿರುವ ಎಲ್ಲಾ ಪರಿಸರ ವ್ಯವಸ್ಥೆಗೆ ಇದರಿಂದ ತೊಂದರೆ ಎದುರಾಗುತ್ತದೆ.

juhi chawla FB medium

5ಜಿಯಿಂದ ಮಾನವಕುಲದ, ಪುರುಷ, ಮಹಿಳೆ, ಮಗು, ವಯಸ್ಕ, ಶಿಶು, ಪ್ರಾಣಿ ಮತ್ತು ಎಲ್ಲಾ ವಿದಧ ಜೀವಿಗಳಿಗೂ ಇದರಿಂದ ಯಾವುದೇ ದುಷ್ಟರಿಣಾಮಗಳಿಲ್ಲ ಎಂದು ಪರೀಕ್ಷಿಸುವಂತೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ಕೊಡಬೇಕೆಂದು ವಕೀಲರಾದ ದೀಪಕ್ ಖೋಸ್ಲಾ ಅವರ ಮೂಲಕ ಸಲ್ಲಿಸಲಾಗಿರುವ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *