ತುಮಕೂರು: ನಾನೇಕೆ ಸಚಿವ ಸ್ಥಾನ ತ್ಯಾಗ ಮಾಡಲಿ, ನಾನೊಬ್ಬಳೆ ಮಹಿಳಾ ಮಂತ್ರಿ ಇರೋದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಕುರಿತು ನಗರದಲ್ಲಿ ಮಾತನಾಡಿದ ಅವರು, ಸಂಘಟನೆ ಮೂಲಕ ಬಂದು ಸಾಕಷ್ಟು ಕೆಲಸ ಮಾಡಿದ್ದೇನೆ. ರಾಜ್ಯ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಕೆಲಸ ಮಾಡಿದ್ದೇನೆ. ಸಚಿವ ಸ್ಥಾನ ತ್ಯಾಗದ ಬಗ್ಗೆ ರಾಜ್ಯ ಅಥವಾ ರಾಷ್ಟ್ರದ ನಾಯಕರಿಂದ ಸೂಚನೆ ಬಂದಿಲ್ಲ. ಸಚಿವ ಸ್ಥಾನ ಕೈತಪ್ಪುವ ಕುರಿತು ಮಾಧ್ಯಮಗಳು ಎರಡು ಬಾರಿ ಹೇಳಿವೆ, ಅದು ಸುಳ್ಳಾಗಿದೆ. ಈಗ ಮೂರನೇ ಬಾರಿಯೂ ಸುಳ್ಳಾಗಲಿದೆ ಎಂದು ತಿಳಿಸಿದರು.
Advertisement
Advertisement
ಸಚಿವ ಸ್ಥಾನ ತ್ಯಜಿಸುವ ಕುರಿತು ವರಿಷ್ಠರಿಂದ ಒತ್ತಡ ಬಂದರೆ ಆಮೇಲೆ ನೋಡೋಣ. ಇರೋಳು ಒಬ್ಬಳು ಮಹಿಳಾ ಮಂತ್ರಿ ನಾನು. ಸಮರ್ಪಕವಾಗಿ ಕೆಲಸ ಮಾಡುತ್ತಿದ್ದೇನೆ. ಆದರೆ ಮಾಧ್ಯಮಗಳು ಬರೀ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿವೆ ಎಂದು ಮಾಧ್ಯಮಗಳ ವಿರುದ್ಧ ಅಸಮಾಧಾನ ಹೊರ ಹಾಕಿದರು.
Advertisement
ಲಾಕ್‍ಡೌನ್ ವೇಳೆಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗಿವೆ. ತುಮಕೂರು ಜಿಲ್ಲೆಯಲ್ಲೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚಾಗಿವೆ. ಇದಕ್ಕೆ ಕಾರಣ, ಶಿಕ್ಷೆ ಕುರಿತು ಅಧಿಕಾರಗಳ ಸಭೆ ನಡೆಸುತ್ತೇನೆ ಎಂದರು.
Advertisement
ತುಮಕೂರು ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಸಭೆ ನಡೆಸಿದರು. ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್, ಎಸ್‍ಪಿ ಡಾ.ಕೋನ ವಂಶಿ ಕೃಷ್ಣ, ಜಿ.ಪಂ ಸಿಇಒ ಶುಭಕಲ್ಯಾಣ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.