ಬೆಂಗಳೂರು: ನಾಯಕತ್ವ ಬದಲಾವಣೆಯ ಚರ್ಚೆಯು ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಗೇರಿದಾಗಿನಿಂದಲೂ ಈ ಇದೆ. ಆದರೆ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಅರುಣ್ ಸಿಂಗ್ ನಾಯಕತ್ವ ಬದಲಾವಣೆಯಾಗಲೀ ಮುಖ್ಯಮಂತ್ರಿಯ ಬದಲಾವಣೆಯಾಗಲೀ ಇಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬಿ.ಸಿ.ಪಾಟೀಲ್, ಜೂನ್ 16 ರಂದು ಉಸ್ತುವಾರಿಗಳು ಸಭೆ ಕರೆದಿದ್ದಾರಾದರೂ ಚರ್ಚೆಯ ವಿಷಯ ಗೊತ್ತಿಲ್ಲ. ಸಚಿವರ ಸಭೆಯದು. ಅದರಲ್ಲಿ ತಾವು ಸಹ ಭಾಗವಹಿಸುತ್ತಿದ್ದೇನೆ. ಇನ್ನೂ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ. ಇದನ್ನೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಸಹ ತಿಳಿಸಿದ್ದಾರೆ. ಪಕ್ಷದ ವರಿಷ್ಠರು ಯಾವುದೇ ತೀರ್ಮಾನ ಕೈಗೊಂಡರೂ ಎಲ್ಲರೂ ಅದಕ್ಕೆ ಬದ್ಧರಾಗಬೇಕು ಎಂದರು.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಬುಧವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮೂರು ದಿನಗಳ ಕಾಲ ರಾಜ್ಯದಲ್ಲಿ ವಾಸ್ತವ್ಯ ಹೂಡಲಿರುವ ಅರುಣ್ ಸಿಂಗ್, ಸಿಎಂ, ರಾಜ್ಯಾಧ್ಯಕ್ಷರು, ಸಚಿವರು, ಸಂಸದರು, ಶಾಸಕರ ಜತೆ ಪ್ರತ್ಯೇಕ ಚರ್ಚೆ ನಡೆಸಲಿದ್ದಾರೆ.