ಲಕ್ನೋ: ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಮಧ್ಯೆ ವೈದ್ಯಕೀಯ ಕಾಲೇಜಿನಲ್ಲಿ ದಾಖಲಾದ ಕೊರೊನಾ ಪಾಸಿಟಿವ್ ಗರ್ಭಿಣಿಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಗೋರಖ್‍ಪುರ ಜಿಲ್ಲೆಯ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲಿ 26 ವರ್ಷದ ಕೊರೊನಾ ಸೋಂಕಿತೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದು, ತಾಯಿ ಮತ್ತು ಮೂವರು ಮಕ್ಕಳು ಆರೋಗ್ಯವಾಗಿದ್ದಾರೆ. ಆದರೆ ನಾಲ್ಕನೇ ನವಜಾತ ಶಿಶುವಿನ ಸ್ಥಿತಿ ಗಂಭೀರವಾಗಿದ್ದು, ಮಗುವನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ.
Advertisement
Advertisement
ಅನಾರೋಗ್ಯದ ಕಾರಣ ಡಿಯೋರಿಯಾ ಜಿಲ್ಲೆಯ ಗೌರಿಬಜಾರ್ ಮೂಲದ ಮಹಿಳೆಯೊಬ್ಬರು ಮಂಗಳವಾರ ಬಿಆರ್‌ಡಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದರು. ಗರ್ಭಿಣಿಗೆ ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದರಿಂದ ವೈದ್ಯರು ಆಂಟಿಜೆನ್ ಕಿಟ್ ಮೂಲಕ ಕೋವಿಡ್ ಟೆಸ್ಟ್ ಮಾಡಿಸಿದ್ದರು.
Advertisement
Advertisement
ಈ ವೇಳೆ ಮಹಿಳೆಗೆ ಕೊರೊನಾ ಪಾಸಿಟಿವ್ ವರದಿ ಬಂದಿತ್ತು. ಕೂಡಲೇ ಗರ್ಭಿಣಿಯ ಸ್ಥಿತಿಯನ್ನು ನೋಡಿದ ಮಹಿಳಾ ವೈದ್ಯರು ಅಲ್ಲಿಯೇ ಅಡ್ಮಿಟ್ ಮಾಡಿಕೊಂಡು ಚಿಕಿತ್ಸೆ ನೀಡಿದ್ದಾರೆ. ನಂತರ ಸ್ತ್ರೀರೋಗ ತಜ್ಞರು ಸಿಸೇರಿಯನ್ ಮಾಡಿದ್ದಾರೆ.
ಇಂದೊಂದು ಸವಾಲಿನ ಕೆಲಸವಾಗಿದೆ. ಆದರೂ ಹೆರಿಗೆಯ ಬಳಿಕ ನಾಲ್ಕು ನವಜಾತ ಶಿಶುಗಳ ಮಾದರಿಯನ್ನು ಕೋವಿಡ್ ಟೆಸ್ಟ್‌ಗೆ ಕಳುಹಿಸಲಾಗಿದೆ. ಮಹಿಳೆ ಮತ್ತು ಮೂವರು ಮಕ್ಕಳು ಆರೋಗ್ಯವಾಗಿದ್ದಾರೆ. ಒಂದು ಶಿಶುವಿನ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂದು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಗಣೇಶ್ ಕುಮಾರ್ ತಿಳಿಸಿದ್ದಾರೆ.