ಮಡಿಕೇರಿ: ಕೊಡಗಿನ ಭಾಗಮಂಡಲ ಬ್ರಹ್ಮಗಿರಿ ಬೆಟ್ಟದಲ್ಲಿ ನಡೆಯುತ್ತಿರುವ ಆಪರೇಷನ್ ಬ್ರಹ್ಮಗಿರಿ ಕಾರ್ಯಾಚರಣೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಮಣ್ಣಿನಲ್ಲಿ ಹೂತು ಹೋಗಿರುವ ನಾಲ್ಕು ಮೃತದೇಹಗಳು ಸಿಗುವವರೆಗೂ ಕಾರ್ಯಚರಣೆ ಮಾಡುತ್ತೀವಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವಿ.ಸೋಮಣ್ಣ ಅವರು, ಬೆಟ್ಟ ಕುಸಿತವಾದ ನಂತರ ಸರ್ಕಾರ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಒಬ್ಬರ ಮೃತದೇಹ ಸಿಕ್ಕಿದ ಮೇಲೆ ಮೂರು ದಿನಗಳಿಂದ ಎನ್‍ಡಿಎಫ್‍ಆರ್ ತಂಡ, ಪೊಲೀಸ್, ಅಗ್ನಿಶಾಮಕ ದಳದವರು ಸೇರಿ ನಿರಂತರವಾಗಿ ಕಾರ್ಯಾಚರಣೆ ಮಾಡುತ್ತಿದೆ. ಅರ್ಚಕರ ಮನೆಯ ಮಂಚ, ಕುರ್ಚಿಗಳು 60 ಅಡಿಯ ಆಳದಲ್ಲಿ ಬಿದ್ದಿವೆ. ಈಗ ಆ ಪ್ರದೇಶದಲ್ಲೂ ಹುಡುಕಾಟ ಮಾಡುತ್ತಿದ್ದೀವಿ ಎಂದರು.
Advertisement
Advertisement
ಮಣ್ಣಿನಲ್ಲಿ ಹೂತು ಹೋಗಿರುವ ನಾಲ್ಕು ಮೃತ ದೇಹಗಳು ಸಿಗುವವರೆಗೂ ಕಾರ್ಯಚರಣೆ ಮಾಡುತ್ತೀವಿ. ಸ್ಥಳಕ್ಕೆ ಶ್ವಾನ ದಳವನ್ನು ಕರೆಸಲಾಗಿದೆ. ಆದರೆ ಮಳೆ ಬರುತ್ತಿರುವುದರಿಂದ ವಾಸನೆ ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ. ಯಾವ ಯಾವ ರೀತಿ ಶೋಧಕಾರ್ಯ ಮಾಡಬೇಕೋ ಎಲ್ಲವನ್ನು ಸರ್ಕಾರ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಕಾರ್ಯಾಚರಣೆ ನಿಲ್ಲಿಸುವ ತೀರ್ಮಾನಕ್ಕೆ ಬರುವುದಿಲ್ಲ ಎಂದು ಸೋಮಣ್ಣ ಸ್ಪಷ್ಟಪಡಿಸಿದರು.
Advertisement
Advertisement
ಪೂಜೆ ನಿಂತಿರುವ ತಲಕಾವೇರಿಯಲ್ಲಿ ಇವತ್ತು ಅಥವಾ ನಾಳೆಯಿಂದ ಪೂಜೆ ಆರಂಭ ಮಾಡುತ್ತೀವಿ. ಮೃತದೇಹ ಸಿಗುವವರೆಗೂ ಪೂಜೆ ಬೇಡ ಎಂಬ ತೀರ್ಮಾನ ಮಾಡಿಲ್ಲ. ನಾಳೆಯೊಳಗೆ ಪೂಜೆ ಶುರು ಮಾಡುತ್ತೀವಿ ಎಂದು ಹೇಳಿದ್ದಾರೆ.