ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ರೈತ ಪ್ರತಿಭಟನೆ ಬೆಂಬಲಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ (84) ಅವರು ನಾಳೆಯಿಂದ ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ರೈತರ ಪ್ರಮುಖ ಬೇಡಿಕೆಗಳಿಗಾಗಿ ನಾನು ಹೋರಾಟ ನಡೆಸುತ್ತಿದ್ದೇನೆ. ಆದರೆ ಸರ್ಕಾರ ರೈತರ ಬಗ್ಗೆ ಪ್ರಾಮುಖ್ಯತೆ ನೀಡುತ್ತಿಲ್ಲ. ರೈತರ ಸಮಸ್ಯೆ ಕುರಿತಾಗಿ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳುತ್ತಿಲ್ಲ ಎಂದು ಅಣ್ಣಾ ಹಜಾರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಹರಾಷ್ಟ್ರದ ಅಹ್ಮದ್‍ನಗರ್‍ನಲ್ಲಿ ನಾಳೆಯಿಂದ ಉಪವಾಸ ಸತ್ಯಾಗ್ರಹ ಆರಂಭವಾಗಲಿದೆ. ಅವರಿಗೆ ಬೆಂಬಲ ಸೂಚಿಸುವವರು ಅವರು ಇರೋ ಸ್ಥಳದಲ್ಲೇ ಪ್ರತಿಭಟನೆ ನಡೆಸಲು ಅಣ್ಣಾ ಹಜಾರೆ ಮನವಿ ಮಾಡಿದ್ದಾರೆ.