ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಉದ್ದೇಶಿಸಿ ಸಂಜೆ 4.30ಕ್ಕೆ ಮಾತನಾಡಲಿದ್ದಾರೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಈ ಕುರಿತು ಪ್ರಧಾನಿ ಮೋದಿ ಭಾಷಣದಲ್ಲಿ ಮಾತನಾಡಲಿದ್ದಾರೆ ಎಂದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ತಿಳಿಸಿದೆ. ಅಲ್ಲದೇ ಕೊರೊನಾ ಅನ್‍ಲಾಕ್ 3.0 ನಾಳೆಯಿಂದ ಜಾರಿ ಆಗಲಿದೆ. ಈ ವೇಳೆಯಲ್ಲೇ ಪ್ರಧಾನಿಗಳು ಭಾಷಣ ಮಾಡುತ್ತಿರುವುದು ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.
Advertisement
Prime Minister Narendra Modi to address the Grand Finale of the largest ever online hackathon in the world on 1st August 2020 through video-conference: Ministry of Human Resource Development pic.twitter.com/a2lBcCT2L7
— ANI (@ANI) July 31, 2020
Advertisement
ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣದ ಮಾಧ್ಯಮವಾಗಬೇಕು ಎಂಬುವುದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಉದ್ದೇಶವಾಗಿದ್ದು, ಹಲವು ರಾಜ್ಯಗಳು ಹೊಸ ನೀತಿಯನ್ನು ಸ್ವಾಗತಿಸಿವೆ. ಬರೋಬ್ಬರಿ 34 ವರ್ಷಗಳ ಬಳಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಆದ್ದರಿಂದ ಇದರ ಮಹತ್ವ, ಶಿಕ್ಷಣ ಕ್ಷೇತ್ರದಲ್ಲಿ ಆಗುವ ಬದಲಾವಣೆಯನು ದೇಶದ ಮನವರಿಕೆ ಮಾಡಲು ಮೋದಿ ಮಾತನಾಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.