ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಳೆ ಬೆಳಗ್ಗೆ 10.30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಸದಾಶಿವನಗರದ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲಿದ್ದಾರೆ. ಸಿಡಿ ಪ್ರಕರಣ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಕೇಸ್ ವಾಪಸ್ ಪಡೆದುಕೊಂಡ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸುತ್ತಿರುವುದು ತೀವ್ರ ಕುತೂಹಲ ಹುಟ್ಟಿಸಿದೆ.
ಮಾರ್ಚ್ 2ರಂದು ಮಾಜಿ ಸಚಿವರ ವಿರುದ್ಧ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಶುಕ್ರವಾರ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು.
ಇತ್ತ ವೀಡಿಯೋ ಸಂಚಲನ ಸೃಷ್ಟಿಸಿ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದರು. ಆ ಬಳಿಕದಿಂದ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ನಾಳೆ ಅವರು ಮೀಡಿಯಾ ಮುಂದೆ ಬರುತ್ತಿದ್ದು, ಏನು ಹೇಳುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.