ಬೆಂಗಳೂರು: ರಾಜರಾಜೇಶ್ವರಿ ಕ್ಷೇತ್ರ ಉಪ ಚುನಾವಣೆಯ ಸಂಬಂಧ ನಾಳೆ ಬೆಳಗ್ಗೆ 11ಗಂಟೆಗೆ ಮುನಿರತ್ನ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಹಕಾರ ಖಾತೆಯ ಸಚಿವ ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ.
ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಳೆ ಬೆಳಗ್ಗೆ9.30ಕ್ಕೆ ಮುನಿರತ್ನ ಅವರನ್ನು ಪಕ್ಷದ ಕಚೇರಿಗೆ ಬರಲು ಹೇಳಿದ್ದಾರೆ. 11 ಗಂಟೆಗೆ ಮುನಿರತ್ನ ನಾಮಪತ್ರ ಸಲ್ಲಿಸುತ್ತಾರೆ. ಸಿಎಂ ಯಡಿಯೂರಪ್ಪನವರೇ ಈ ಬಗ್ಗೆ ಅಧಿಕೃತವಾಗಿ ತಿಳಿಸುತ್ತಾರೆ. ಅಭ್ಯರ್ಥಿ ವಿಚಾರವಾಗಿ ಯಾವುದೇ ಗೊಂದಲ ಇಲ್ಲ ಎಂದು ಹೇಳಿದರು.
Advertisement
Advertisement
ಈ ವಿಚಾರದ ಬಗ್ಗೆ ಮುನಿರತ್ನ ಪ್ರತಿಕ್ರಿಯಿಸಿ, ಎಸ್.ಟಿ.ಸೋಮಶೇಖರ್ ಹೇಳಿಕೆಯ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ತೀರ್ಮಾನವೇ ಅಂತಿಮ. ಪಕ್ಷದಿಂದ ನನಗೆ ಯಾವುದೇ ಮಾಹಿತಿ ಇಲ್ಲ. ಸೋಮಶೇಖರ್ ಹೇಳಿಕೆ ಬಗ್ಗೆ ಅವರ ಜತೆಯೇ ಮಾತಾಡುತ್ತೇನೆ ಎಂದು ತಿಳಿಸಿದರು.
Advertisement
ಊಟದ ಸಮಯ, ಊಟಕ್ಕಾಗಿ ಸಿಎಂ ಯಡಿಯೂರಪ್ಪನವರ ಜತೆ ಬಂದಿದ್ದೆವು. ನಾಳೆ ಬಿಜೆಪಿ ಕಚೇರಿಗೆ ಬರುವಂತೆ ಹೇಳಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಇಷ್ಟು ದಿನ ಅನುಭವಿಸಿದ್ದ ನೋವು ನನಗೆ ಗೊತ್ತು: ಮುನಿರತ್ನ
Advertisement
ತಾಜ್ ಹೋಟೆಲಿನಲ್ಲಿ ಸಿಎಂ ಬಿಎಸ್‌ವೈ ಆಪ್ತ ಸಚಿವರ ಜೊತೆ ಮಧ್ಯಾಹ್ನ ಭೋಜನ ಮಾಡಿದರು. ಸಿಎಂಗೆ ಸಚಿವ ಸೋಮಣ್ಣ , ಆರ್ ಅಶೋಕ್, ಬಸವರಾಜ್ ಬೊಮ್ಮಾಯಿ, ಮುನಿರತ್ನ, ಎಸ್.ಟಿ.ಸೋಮಶೇಖರ್ ಸಾಥ್ ನೀಡಿದ್ದರು.