ಬೆಂಗಳೂರು: ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಗುಡುಗು -ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಮಾಹಿತಿ ನೀಡಿದೆ. ಇದನ್ನೂ ಓದಿ : ಒಂದೇ ಗಂಟೆಗೆ ಒಂದುಕಾಲು ಇಂಚು ಮಳೆ – ಮಲೆನಾಡಿಗರಿಗೆ ಸಂತೋಷದ ಜೊತೆ ಆತಂಕ
Advertisement
Advertisement
ಕೇರಳಕ್ಕೆ ನೈರುತ್ಯ ಮಾರುತಗಳು ಈಗಾಗಲೇ ಪ್ರವೇಶಿಸಿದೆ. ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿ ಮೇಲ್ಮೆ ಸುಳಿಗಾಳಿ ತೀವ್ರವಾಗಿರುವುದರಿಂದ ಕರ್ನಾಟಕದ ಕೆಲವೆಡೆ ಜೂನ್ 1ರಿಂದ ಮಳೆಯಾಗುತ್ತಿದೆ.
Advertisement
ಜೂನ್ 6ರ ತನಕವೂ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ.ಒಟ್ಟು 17 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
Advertisement
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಹಾಸನ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಎಷ್ಟು ಮಳೆಯಾಗುತ್ತೆ?
64.5 ಮಿ.ಮೀ ನಿಂದ 115.5 ಮಿ.ಮೀ ಒಳಗಡೆ ಮಳೆಯಾಗುವ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್ ಘೋಷಣೆಯಾಗುತ್ತದೆ. 115.6 ಮಿ.ಮೀ ನಿಂದ 204.4 ಮಿ.ಮೀ. ಒಳಗಡೆ ಮಳೆಯಾಗಲಿದ್ದರೆ ಆರೆಂಜ್ ಅಲರ್ಟ್ ಎಂದು ಪ್ರಕಟಿಸಲಾಗುತ್ತದೆ. 204.5 ಮಿ.ಮೀಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದರೆ ರೆಡ್ ಅಲರ್ಟ್ ಘೋಷಣೆ ಮಾಡಲಾಗುತ್ತದೆ.