ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಕಾರು ಡಿಕ್ಕಿ

Public TV
1 Min Read
mdk accident

ಮಡಿಕೇರಿ: ತರಕಾರಿ ತುಂಬಿ ರಸ್ತೆ ಬದಿ ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಕಾರು ಡಿಕ್ಕಿಯಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ 7ನೇ ಮೈಲಿ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಎರಡೂ ವಾಹನಗಳಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

mdk accident 2 medium

ಬೆಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಮಾರುತಿ ಸುಜುಕಿ ಬಲೆನೋ ಕಾರು (ಕೆಎ13-ಪಿ.5434) ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ 7ನೇ ಮೈಲಿ ಬಳಿ, ತರಕಾರಿ ತುಂಬಿ ರಸ್ತೆ ಬದಿ ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಟಾಟಾ ಏಸ್ ವಾಹನದಲ್ಲಿದ್ದ ತರಕಾರಿ ಚೆಲ್ಲಾಪಿಲಿಯಾಗಿ ರಸ್ತೆಗೆ ಬಿದ್ದಿವೆ.

mdk accident 3 medium

ಕಾರು ಅತೀ ವೇಗದಲ್ಲಿದ್ದ ಪರಿಣಾಮ ಎರಡು ಬಾರಿ ಪಲ್ಟಿಯಾಗಿ ರಸ್ತೆಗೆ ಬಿದ್ದಿದೆ. ಆದರೆ ವಾಹನದಲ್ಲಿದ್ದವರಿಗೆ ಸಣ್ಣ ಪ್ರಮಾಣದ ಗಾಯಗಳಿಂದ ಪಾರಾಗಿದ್ದಾರೆ. ಸುಂಟಿಕೊಪ್ಪ ಠಾಣಾಧಿಕಾರಿ ಪುನೀತ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share This Article