– ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು
ತುಮಕೂರು: ನಿಂತಿದ್ದ ಲಾರಿಗೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದಿದೆ.
ಮಧುಗಿರಿ ತಾಲೂಕಿನ ಚಂದ್ರಬಾವಿ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಇನೋವಾ ಕಾರಿನಲ್ಲಿದ್ದ ದುಗ್ಗಪ್ಪ (21) ಮತ್ತು ನರಸಿಂಹಮೂರ್ತಿ (22) ಮೃತರು ದುರ್ದೈವಿಗಳು. ಅಪಘಾತದಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ಮೃತರು ಪಾವಗಡ ಮೂಲದವರಾಗಿದ್ದು, ಇನೋವಾ ಕಾರಿನಲ್ಲಿ ಬೆಂಗಳೂರಿನಿಂದ ಹೋಗುತ್ತಿದ್ದರು. ಆದರೆ ತಡರಾತ್ರಿ ಮಧುಗಿರಿ ತಾಲೂಕಿನ ಚಂದ್ರಬಾವಿ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.