ಕಲಬುರಗಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಗರ್ಭಿಣಿ ಸೇರಿ 7 ಮಂದಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಕಲಬುರಗಿ ಹೊರವಲಯದ ಆಳಂದ ರಸ್ತೆಯ ಸಾವಳಗಿ ಬಳಿ ನಡೆದಿದೆ.
ಮೃತ ದುರ್ದೈವಿಗಳನ್ನು ಗರ್ಭಿಣಿ ಇರ್ಫಾನಾ ಬೇಗಂ(25), ರುಚಿಯಾ ಬೇಗಂ(50), ಅಬೇದಾಬಿ ಬೇಗಂ(50), ಮುನೀರ್(28), ಮಹಮ್ಮದ್ ಅಲಿ(38), ಶೌಕತ್ ಅಲಿ(29) ಹಾಗೂ ಜಯಚುನಬಿ(60) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿವಾಸಿಗಳಾಗಿದ್ದಾರೆ.
ಗಭಿಣಿಯನ್ನು ಹೆರಿಗೆಗಾಗಿ ಕಲಬುರಗಿಗೆ ಕರೆದುಕೊಂಡು ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.