ಬೆಂಗಳೂರು: ವಿವಿಧ ಮಂಡಳಿಗಳ ಅಭಿವೃದ್ಧಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅನುದಾನ ಘೋಷಿಸಿದ್ದಾರೆ. ಅಲ್ಪಸಂಖ್ಯಾತರ ಏಳಿಗೆಗಾಗಿ 1,500 ಕೋಟಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ಮತ್ತು ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪಸಿ 500 ಕೋಟಿ ಮೀಸಲಿರಿದ್ದಾರೆ.
ಬಡ, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಅಭ್ಯುದಯಕ್ಕೆ ಸರ್ಕಾರದ ಒತ್ತು. ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರುಸು ಹಿಂದುಳಿದ ಅಭಿವೃದ್ಧಿ ನಿಗಮ, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಉಪ್ಪಾರ, ಆರ್ಯವೈಶ್ಯ, ಮರಾಠಾ, ಅಂಬಿಗರ ಚೌಡಯ್ಯ, ಕಾಡುಗೊಲ್ಲರ, ಸವಿತಾ ಅಭಿವೃದ್ಧಿ ನಿಗಮಗಳಿಗೆ ಪ್ರಸಕ್ತ ಸಾಲಿನಲ್ಲಿ 500 ಕೋಟಿ ಮೀಸಲು.
Advertisement
Advertisement
ವೀರಶೈವ ಲಿಂಗಾಯತ ಸಮಾಜದ ಸಮಗ್ರ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ.ಗಳ ಅನುದಾನ. ಈಗಾಗಲೇ 100 ಕೋಟಿ ಬಿಡುಗಡೆಗೊಳಿಸಲಾಗಿದೆ. ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪನೆ. ನಿಗಮ ಚಟುವಟಿಕೆಗಳಿಗೆ 500 ಕೋಟಿ ವೆಚ್ಚ ಮಾಡಲು ಯೋಜಿಸಲಾಗಿದೆ. ಅಲ್ಪಸಂಖ್ಯಾತರ ಏಳಿಗೆಗಾಗಿ 1,500 ಕೋಟಿ ಮೀಸಲು
Advertisement
ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಚರ್ಚ್ ಗಳ ದುರಸ್ತಿ, ನವೀಕರಣ, ಸಮುದಾಯದ ಭವನ ಕಟ್ಟಡ ನಿರ್ಮಾಣ, ಆನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ನೆರವು ಮುಂತಾದ ಕಾರ್ಯಕ್ರಮಳಿಗೆ 200 ಕೋಟಿ ಮೀಸಲು
Advertisement
2020-21ನೇ ಸಾಲಿನಲ್ಲಿ 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮಗಳೊಂದಿಗೆ ಆಂಗ್ಲ ಮಾಧ್ಯಮ ಆರಂಭಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಮಾದರಿ ಶಾಲೆ/ಕಾಲೇಜುಗಳಲ್ಲಿ ತಂತ್ರಜ್ಞಾನ ಆಧಾರಿತ ಕಲಿಕಾ ಕಾರ್ಯಕ್ರಮ ಅನುಷ್ಠಾನಗೊಳಿಸಿ, ಸದರಿ ಶಾಲಾ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಡಿಜಿಟಲ್ ತಂತ್ರಜ್ಞಾನದ ಮೂಲಕ ಎಲ್ಲ ವಿಷಯಗಳಲ್ಲಿ ಬೋಧನಾ ಮತ್ತು ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು.
ಶ್ರವಣಬೆಳಗೊಳ ಸೇರಿದಂತೆ ಮತ್ತಿತ್ತರ ಜೈನ ಪುಣ್ಯ ಕ್ಷೇತ್ರಗಳಲ್ಲಿ ವಸತಿ ಗೃಹ, ಪಾದಚಾರಿ ರಸ್ತೆಗಳು ಮತ್ತು ಇತರೆ ಮೂಲಭೂತ ಸೌಕರ್ಯಗಳಿಗಾಗಿ 50 ಕೋಟಿ ಮೀಸಲು. ಡಾ.ಬಿ.ಆರ್.ಅಂಬೇಡ್ಕರ್ ಭೇಟಿ ನೀಡಿದ್ದ ಹಾಸನದ ಎ.ಕೆ.ಬೋರ್ಡಿಂಗ್ ಹೋಮ್‍ಗೆ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ನೀಡಲಾಗಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಕೊಲ್ಹಾಪುರಿ ಪಾದರಕ್ಷೆಗಳ ಕ್ಲಸ್ಟರ್ ಮತ್ತು ಚಿತ್ರದುರ್ಗ ನಗರದಲ್ಲಿ ಕೇಂದ್ರ ಪಾದರಕ್ಷಾ ತರಬೇತಿ ಸಂಸ್ಥೆಯ ವಿಸ್ತರಣಾ ಕೇಂದ್ರ ಪ್ರಾರಂಗಣ ಪರಿಶಿಷ್ಟ ಪಂಗಡದ ಆಶ್ರಮ ಶಾಲೆಗಳನ್ನು ವಾಲ್ಮೀಕಿ ಆಶ್ರಮ ಶಾಲೆ ಎಂದು ಮರು ನಾಮಕಾರಣ ಮಾಡಲಾಗುವುದು.