ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವಿ ಬಿ.ಶ್ರೀರಾಮುಲು ಮಧ್ಯೆ ಟ್ವೀಟ್ ಸಮರ ಮುಂದುವರಿದಿದ್ದು, ಇದೀಗ ಶ್ರೀರಾಮುಲು ಸರಣಿ ಟ್ವೀಟ್ ಮಾಡಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.
ಪ್ರಧಾನಿ @narendramodi ಯವರು, ಮುಖ್ಯಮಂತ್ರಿಗಳಾದ @BSYBJP ಹಾಗೂ ಸರ್ಕಾರಗಳ ಮೇಲೆ ಆರೋಪ ಮಾಡೋದಕ್ಕೂ ಮುನ್ನ, ತಾವು ಕಾಶ್ಮೀರದಿಂದ-ಕನ್ಯಾಕುಮಾರಿಯವರೆಗೂ ಆರೋಪ ಮಾಡಿ ಆರೋಪಿಗಳಾಗಿರುವ ನಿಮ್ಮ ಪಕ್ಷದ ‘ರಾಜ’-‘ಮಹಾರಾಜ’ ರ ಬಗ್ಗೆ ಗಮನ ಹರಿಸುವುದು ಒಳಿತಲ್ಲವೇ @siddaramaiah ನವರೇ? 1/2
— B Sriramulu (@sriramulubjp) July 6, 2020
Advertisement
ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ ಹಾಗೂ ಸರ್ಕಾರಗಳ ಮೇಲೆ ಆರೋಪ ಮಾಡೋದಕ್ಕೂ ಮುನ್ನ, ತಾವು ಕಾಶ್ಮೀರದಿಂದ-ಕನ್ಯಾಕುಮಾರಿಯವರೆಗೂ ಆರೋಪ ಮಾಡಿ ಆರೋಪಿಗಳಾಗಿರುವ ನಿಮ್ಮ ಪಕ್ಷದ ‘ರಾಜ’-‘ಮಹಾರಾಜ’ ರ ಬಗ್ಗೆ ಗಮನ ಹರಿಸುವುದು ಒಳಿತಲ್ಲವೇ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ.
Advertisement
ಮತ್ತೊಂದು ಟ್ವೀಟ್‍ನಲ್ಲಿ ಸಿದ್ದರಾಮಯ್ಯನವರೇ, ನಾಡು ಸಂಕಷ್ಟದಲ್ಲಿದೆ, ಜನರು ಸಮಸ್ಯೆಯಲ್ಲಿದ್ದಾರೆ. ಕೊರೊನಾವನ್ನು ಗೆಲ್ಲಬೇಕಿದೆ. ಇದು ಕೆಲಸ ಮಾಡೋ ಸಮಯ. ನಾಡಿನ ಜನತೆಗೆ ಕೆಲಸ ಮಾಡಿ, ಕೆಲಸ ಮಾಡಲು ಬಿಡಿ. ನಿಮ್ಮಿಂದ ಇಷ್ಟು ಕನಿಷ್ಟ ಮಟ್ಟದ ಸಹಕಾರವನ್ನು ಜನತೆಯ ಪರವಾಗಿ ಕೇಳುತ್ತೇನೆ ಎಂದು ಟ್ವೀಟ್ ಮಾಡುವ ಮೂಲಕ ಹರಿಹಾಯ್ದಿದ್ದಾರೆ.
Advertisement
@siddaramaiah ನವರೇ.
ನಾಡು ಸಂಕಷ್ಟದಲ್ಲಿದೆ, ಜನರು ಸಮಸ್ಯೆಯಲಿದ್ದಾರೆ, ಕೊರೊನಾವನ್ನು ಗೆಲ್ಲಬೇಕಿದೆ, ಇದು ಕೆಲಸ ಮಾಡೋ ಸಮಯ, ನಾಡಿನ ಜನತೆಗೆ ಕೆಲಸ ಮಾಡಿ, ಕೆಲಸ ಮಾಡಲು ಬಿಡಿ. ನಿಮ್ಮಿಂದ ಇಷ್ಟು ಕನಿಷ್ಟ ಮಟ್ಟದ ಸಹಕಾರವನ್ನು ಜನತೆಯ ಪರವಾಗಿ ಕೇಳುತ್ತೇನೆ. 2/2@PMOIndia @CMofKarnataka
— B Sriramulu (@sriramulubjp) July 6, 2020
Advertisement
ಕಳೆದ ಹಲವು ದಿನಗಳಿಂದ ಸಿದ್ದರಾಮಯ್ಯ ಹಾಗೂ ಶ್ರೀರಾಮುಲು ಮಧ್ಯೆ ಟ್ವೀಟ್ ವಾರ್ ನಡೆಯುತ್ತಿದ್ದು, ಕೊರೊನಾ ಸಂದರ್ಭದಲ್ಲಿ ಸರ್ಕಾರ ಹಗರಣ ಮಾಡಿದೆ ಎಂಬ ಗಂಭೀರ ಆರೋಪವನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ.