ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
Advertisement
ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ರಾಜ್ಯಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ರೂ. ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಅಡಚಣೆ ಎದುರಾಗಿರುವುದರಿಂದ ಇದನ್ನು ಕೂಡಲೇ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ ನೆರವು: ಬೊಮ್ಮಾಯಿ
Advertisement
ಇಂದು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಬರಬೇಕಾಗಿರುವ ಜಿ.ಎಸ್ ಟಿ ಪರಿಹಾರ ಬಿಡುಗಡೆ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲಾಯಿತು. @nsitharaman #GSTcompensation @CMofKarnataka pic.twitter.com/RHpYr61Mxk
— Basavaraj S Bommai (@BSBommai) July 31, 2021
Advertisement
ಇದಲ್ಲದೆ ನೂತನವಾಗಿ ಮುಖ್ಯಮಂತ್ರಿಯಾಗಿರುವ ಬೊಮ್ಮಾಯಿ ತಮ್ಮ ಅಧಿಕಾರವಧಿಯಲ್ಲಿ, ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅಗತ್ಯವಿರುವ ಅನುದಾನ ಬಿಡುಗಡೆಯ ಕುರಿತೂ ಸಹ ಕೇಂದ್ರ ಸಚಿವರ ಗಮನಸೆಳೆದರು.
Advertisement