ಚಂಡೀಗಢ: ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದ ಪರಿಣಾಮ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ.
ಗುರುಗ್ರಾಮ-ದ್ವಾರಕಾ ಎಕ್ಸ್ ಪ್ರೆಸ್ ವೇ ಬಳಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದುಬಿದ್ದಿದೆ. ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
ದೌಲತಾಬಾದ್ ಬಳಿ ಗುರುಗ್ರಾಮ-ದ್ವಾರಕಾ ಎಕ್ಸ್ ಪ್ರೆಸ್ ವೇ ನಲ್ಲಿ ಇಂದು ಬೆಳಿಗ್ಗೆ 7:30ರ ಸುಮಾರಿಗೆ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದೆ. ಪರಿಣಾಮ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಗೊಂಡಿದ್ದ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Advertisement
An elevated portion of the under construction Dwarka Expressway in Gurgaon collapsed around 7.30 am this morning. NHAI officials say there were no fatalities in the incident. The reason for the collapse is yet to be determined. @IndianExpress pic.twitter.com/5NFXzEeQrz
— Sakshi Dayal (@sakshi_dayal) March 28, 2021
Advertisement
ಕುಸಿತಕ್ಕೆ ಕಾರಣ ತಿಳಿದು ಬಂದಿಲ್ಲ, ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗುವುದು. ಇಲ್ಲಿಯವರೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಅದು ಸಂಭವಿಸಿದಾಗ ಜಾಗದಲ್ಲಿ ಯಾವುದೇ ಕೆಲಸಗಳು ನಡೆಯುತ್ತಿರಲಿಲ್ಲ ಎಂದು ದ್ವಾರಕಾ ಎಕ್ಸ್‍ಪ್ರೆಸ್‍ವೆ ವೇ ಯೋಜನಾ ನಿರ್ದೇಶಕ ನಿರ್ಮನ್ ಜಂಬುಲ್ಕರ್ ಹೇಳಿದ್ದಾರೆ.
Advertisement
ಇದು ರಾಷ್ಟ್ರ ರಾಜಧಾನಿ ದೆಹಲಿ ಮತ್ತು ನೆರೆಯ ಗುರುಗ್ರಾಮವನ್ನು ಸಂಪರ್ಕಿಸುವ ಪರ್ಯಾಯ ಮಾರ್ಗವಾಗಿದ್ದು, 27.6 ಕಿ.ಮೀ ಉದ್ದದ ದ್ವಾರಕಾ ಎಕ್ಸ್ ಪ್ರೆಸ್ ವೇ ನಿರ್ಮಾಣಕ್ಕೆ 9,000 ಕೋಟಿ ರೂ. ವೆಚ್ಚವಾಗಲಿದೆ.