ಮುಂಬೈ: ನಿರ್ಮಾಪಕ ಸಂತೋಷ್ ಗುಪ್ತಾ ಅವರ ಪತ್ನಿ ಮತ್ತು ಮಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸಂತೋಷ್ ಗುಪ್ತಾ ಮುಂಬೈನ ಅಂಧೇರಿಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಸೋಮವಾರ ತಾಯಿ-ಮಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಸಂತೋಷ್ ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಇಬ್ಬರನ್ನ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.
ತಾಯಿ ಅಸ್ಮಿತಾ ಗುಪ್ತಾರನ್ನ ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗಳು ಸೃಷ್ಠಿ ದೇಹದ ಶೇ.70ರಷ್ಟು ಭಾಗ ಬೆಂಕಿಗಾಹುತಿ ಆಗಿದ್ದರಿಂದ ಮಂಗಳವಾರ ಐರೋಲಿ ನ್ಯಾಷನಲ್ ಬರ್ನ್ಸ್ ಸೆಂಟರ್ ಗೆ ರವಾನಿಸಲಾಗಿತ್ತು. ಆದ್ರೆ ತಾಯಿ ಸಾವನ್ನಪ್ಪಿದ ಮರುವದಿನವೇ ಮಗಳು ಸಹ ಸಾವನ್ನಪ್ಪಿದ್ದಾರೆ.
ಆತ್ಮಹತ್ಯೆಗೆ ಕಾರಣವೇನು?: ಅಸ್ಮಿತಾ ಕಳೆದ ಹಲವು ದಿನಗಳಿಂದ ಕಿಡ್ನಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅನಾರೋಗ್ಯ ಹಿನ್ನೆಲೆ ಆತ್ಮಹತ್ಯೆಗೆ ಅಸ್ಮಿತಾ ನಿರ್ಧರಿಸಿದ್ದರು. ಇನ್ನು ತಾಯಿ ಕಷ್ಟ ನೋಡಲಾರದೇ ಮಗಳು ಸಹ ಸೂಸೈಡ್ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.