ಬೆಂಗಳೂರು: ನೀರಿನ ವಿಚಾರವಾಗಿ ನಡೆದಿದ್ದ ಜಗಳಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸುಮನ್, ದಿನಕರನ್, ರಂಜಿತ್, ರಂಜಿತೇಶ್ ಕುಮಾರ್ ಹಾಗೂ ಮೂವರು ಅಪ್ರಾಪ್ತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂರು ದಿನಗಳ ಹಿಂದೆ ಭೈರತಿ ಬಂಡೆ ಬಳಿ ಸುರೇಶ್‍ನನ್ನು ಆರೋಪಿಗಳು ಕೊಲೆ ಮಾಡಿದ್ದರು. ಈ ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಮತ್ತು ಕೊಲೆಯಾದ ಸುರೇಶ್ ಒಂದೇ ಏರಿಯಾದವರು. ವಾರದ ಹಿಂದೆ ನೀರಿನ ವಿಚಾರವಾಗಿ ಜಗಳ ನಡೆದಿತ್ತು. ಈ ಬೀದಿ ಜಗಳಕ್ಕೆ ಸೇಡು ತೀರಿಸಿಕೊಳ್ಳಲು ಮೂರು ದಿನಗಳ ಹಿಂದೆ ಆರೋಪಿಗಳು ಕೊಲೆ ಮಾಡಿದ್ದರು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ. ಕೊತ್ತನೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.