ತುಮಕೂರು: ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಿದ್ದಗಂಗಾ ಮಠದ ಅಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮಿಜಿ ಶುಭ ಕೋರಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರು ಇಂದು ನಮ್ಮ ರಾಜ್ಯದ 30ನೇ ಸಿಎಂ ಆಗಿ ಪದಗ್ರಹಣ ಮಾಡಿರೋದು ಸಂತಸದ ವಿಚಾರ ಎಂದರು.
Advertisement
Advertisement
ರಾಜ್ಯದ ಸಮಗ್ರ ಅಭಿವೃದ್ಧಿಯತ್ತ ಅವರು ಗಮನಹರಿಸಲಿ. ಸದ್ಯ ಕೋವಿಡ್ ಮತ್ತು ನೆರೆ ಹಾವಳಿಯನ್ನು ಸಮರ್ಥವಾಗಿ ನಿಭಾಯಿಸಲಿ. ರಾಜ್ಯದ ಬಡವರ ಮತ್ತು ರೈತರ ಪರವಾದ ಚಿಂತನೆ ಇಟ್ಟುಕೊಂಡು ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ನಾವು ನಿರೀಕ್ಷೆ ಮಾಡುತ್ತೇವೆ ಎಂದು ಸ್ವಾಮೀಜಿ ಹೇಳಿದರು.
Advertisement
Advertisement
ಬಸವರಾಜ ಬೊಮ್ಮಾಯಿ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರತಿಜ್ಞಾವಿಧಿ ಸಮಾರಂಭಕ್ಕೂ ಮೊದಲು ಬಾಲಬ್ರೂಯಿ ಆಂಜನೇಯ ದೇವಾಲಯ ಮತ್ತು ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಬೊಮ್ಮಾಯಿ ಭೇಟಿ ನೀಡಿದ್ದರು. ಇನ್ನೊಂದು ವಾರದಲ್ಲಿ ನೂತನ ಸಂಪುಟ ಸಹ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದೆ.