ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಕಾಲೇಜ್ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(20) ಶವವಾಗಿ ಪತ್ತೆಯಾಗಿದ್ದಾಳೆ. ಮಂಗಳೂರು ಹೊರವಲಯದ ಕುಂಪಲ ಆಶ್ರಯ ಕಾಲನಿಯಲ್ಲಿರುವ ನಿವಾಸದಲ್ಲಿ ಶವ ಪತ್ತೆಯಾಗಿದೆ.
ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದ ಪ್ರೇಕ್ಷಾಇವತ್ತು ರಜೆ ಪಡೆದುಕೊಂಡು ಮನೆಯಲ್ಲೇ ಉಳಿದಿದ್ದಳು. ತಾಯಿ ಅಂಗನವಾಡಿ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಒಬ್ಬಳೇ ಇದ್ದಳು.
ಮಧ್ಯಾಹ್ನ ತಾಯಿ ಊಟಕ್ಕೆಂದು ಮನೆಗೆ ಬಂದ ಸಂದರ್ಭ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.