ಹಾಸನ: ಜಿಲ್ಲೆಯ ಆಲೂರು ತಾಲೂಕಿನ ಕಾರ್ಜುವಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆಯಾಗಿದೆ.
ಮೃತ ಸ್ವಾಮೀಜಿಯನ್ನು ಬಾಳೆಹೊನ್ನೂರು ಶಾಖಾಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮಿ ಎಂದು ಗುರುತಿಸಲಾಗಿದೆ. ಆಲೂರು ತಾಲೂಕಿನ ವ್ಯಾಪ್ತಿಯಲ್ಲಿ ಶಂಭುಲಿಂಗಶಿವಾಚಾರ್ಯ ಸ್ವಾಮೀಜಿ ಹೆಚ್ಚು ಜನಪ್ರಿಯವಾಗಿದ್ದರು. ಇದೀಗ ಕಾರ್ಜುವಳ್ಳಿ ಮಠದಲ್ಲಿಯೇ ಸ್ವಾಮೀಜಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ವಾಮೀಜಿ ಸಾವಿನಿಂದ ಭಕ್ತರಲ್ಲಿ ಆತಂಕ ಮನೆ ಮಾಡಿದೆ.
ಮಾರ್ಗದರ್ಶನ ಮಾಡಬೇಕಾದ ಸ್ವಾಮೀಜಿಯವರ ಸಾವಿನ ಬಗ್ಗೆ ಅನುಮಾನ ಮೂಡಿದ್ದು, ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.