ಬೀದರ್: ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ.
ಜಿಲ್ಲೆಯ ಭಾಲ್ಕಿ ತಾಲೂಕಿನ ಜಮಖಂಡಿ ಗ್ರಾಮದ ಬಳಿ ಸೇತುವೆ ದಾಟುವಾಗ ಕೋಳಿ ಆಹಾರ ಸಾಗಾಟ ಮಾಡ್ತಿದ್ದ ಲಾರಿಯೊಂದು ನೋಡು ನೋಡುತ್ತಲೇ ನೀರು ಪಾಲಾದ ಘಟನೆ ನಡೆದಿದೆ.
ಮಹಾರಾಷ್ಟ್ರದ ನಿಲಂಗ ಮೂಲಕ ಬೀದರ್‍ಗೆ ಆಗಮಿಸುತ್ತಿದ್ದ ಲಾರಿ ಮಳೆಯಿಂದ ಮುಳುಗಡೆಯಾದ ಜಮಖಂಡಿ ಗ್ರಾಮದ ಬಳಿಯ ಸೇತುವೆ ಬಳಿ ಲಾರಿ ಪಲ್ಟಿಯಾಗಿದೆ. ಸೇತುವೆ ಮೇಲೆ ನೀರು ಹರಿಯುತ್ತಿದ್ರು ಭಂಡ ಧೈರ್ಯ ಮಾಡಿ ಬಂದಾಗ ನೀರಿನ ರಭಸಕ್ಕೆ ಲಾರಿ ಪಲ್ಟಿಯಾಗಿದೆ. ಲಾರಿ ಪಲ್ಟಿಯಾದ ಪರಿಣಾಮ ಲಾರಿಯಲ್ಲಿದ್ದ ಆಹಾರ ಸಾಮಗ್ರಿಗಳು ನೀರು ಪಾಲಾಗಿವೆ.
ಇತ್ತ ಮಹಾಮಳೆಗೆ ಜಿಲ್ಲೆಯ ಜೀವನದಿ ಮಂಜ್ರಾ ಉಕ್ಕಿ ಹರಿಯುತ್ತಿದೆ. ಔರಾದ್, ಬಸವಕಲ್ಯಾಣ ತಾಲೂಕಿನ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗಿದೆ. ಮಹಾಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದ್ದು, ಹಲವು ಗ್ರಾಮಗಳು ಜಲಾವೃತ, ಹಲವು ಸೇತುವೆಗಳು ಮುಳುಗಡೆಯಾಗಿವೆ.
ಬೀದರ್ ಪಟ್ಟಣದಲ್ಲಿ ಹಲವು ಮನೆಗಳಿಗೆ ನೀರು ನುದ್ದಿ ಅವಾಂತರ ಸೃಷಟಿಯಾಗಿದೆ. ಇನ್ನು ಹಲವು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.