-ಮಲೆನಾಡಿನ ಗ್ರಾಮೀಣ ಭಾಗದಲ್ಲಿ ನೆಟ್ ವರ್ಕ್ ಸಮಸ್ಯೆ
ಶಿವಮೊಗ್ಗ : ಆನ್‍ಲೈನ್ ಶಿಕ್ಷಣಕ್ಕೆ ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಸಮಸ್ಯೆ ಎದುರಾಗಿದೆ. ಆನ್‍ಲೈನ್ ಶಿಕ್ಷಣಕ್ಕೆ ಪವರ್ ಹಾಗೂ ಟವರ್ ಈ ಎರಡೂ ಅತೀ ಮುಖ್ಯವಾಗಿದೆ. ಆದ್ರೆ ಮಲೆನಾಡಿನಲ್ಲಿ ಪವರ್ ಹಾಗೂ ಟವರ್ ಎರಡರದ್ದು ಸಮಸ್ಯೆ ಇದೆ. ಹೀಗಾಗಿ ಇಲ್ಲಿನ ವಿದ್ಯಾರ್ಥಿಗಳು ಆನ್‍ಲೈನ್ ಕ್ಲಾಸ್ ಬಗ್ಗೆ ಒಲವು ತೋರುತ್ತಿಲ್ಲ. ನೆಟ್ ವರ್ಕ್ ಸಿಗಬೇಕು ಅಂದ್ರೆ ಊರಿಂದ ಆಚೆ ಹೋಗಬೇಕಿದೆ.
Advertisement
ದೇಶದೆಲ್ಲೆಡೆ ಕೊರೊನಾ ಮಹಾಮಾರಿ ಎಲ್ಲಾ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಈ ಮಹಾಮಾರಿಯಿಂದ ಮಕ್ಕಳ ಶೈಕ್ಷಣಿಕ ಕಲಿಕೆಯ ಮೇಲೆಯೂ ಪರಿಣಾಮ ಬೀರಿದೆ. ಕೊರೊನಾ ಭಯದಿಂದಾಗಿ ಇದುವರೆಗೂ ಶಾಲಾ ಕಾಲೇಜುಗಳು ಆರಂಭವಾಗಿಲ್ಲ. ಆದರೆ ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಸಕಾರ ಇತ್ತೀಚಿಗೆ ಆನ್‍ಲೈನ್ ಕ್ಲಾಸ್ ನ ಮೊರೆ ಹೋಗಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಮಾತ್ರ ಈ ವ್ಯವಸ್ಥೆ ವರ್ಕ್ ಔಟ್ ಆಗುತ್ತಿಲ್ಲ ಎಂಬ ಮಾತಿಗೆ ಸಾಕ್ಷಿ ದೊರೆತಿದ್ದು, ಅದೆಷ್ಟೋ ಗ್ರಾಮಗಳಲ್ಲಿ ಮಳೆಗಾಲ ಆಗಿರುವುದರಿಂದಾಗಿ 2 ದಿನಕ್ಕೊಮ್ಮೆ ಕರೆಂಟ್ ಬರುತ್ತಿದ್ದು, ಇದು ಕೂಡ ಸಮಸ್ಯೆಯಲ್ಲೊಂದಾಗಿದೆ. ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು ಎಂದು ಸರ್ಕಾರ, ಸದ್ಯ ಆನ್‍ಲೈನ್ ಶಿಕ್ಷಣಕ್ಕೆ ಅವಕಾಶ ಮಾಡಿ ಕೊಟ್ಟಿದೆ. ಈ ಆನ್‍ಲೈನ್ ಶಿಕ್ಷಣ ನಗರ ಪ್ರದೇಶದ ಮಕ್ಕಳಿಗೆ ಮಾತ್ರ ಅನುಕೂಲಕರವಾಗುತ್ತದೆಯೇ ಹೊರತು ಗ್ರಾಮೀಣ ಭಾಗದ ಮಕ್ಕಳಿಗಲ್ಲ. ಇದನ್ನೂ ಓದಿ: ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ಮಾಂಗಲ್ಯ ಅಡವಿಟ್ಟ ತಾಯಿ- ಗದಗ ಜಿಲ್ಲೆಯಲ್ಲಿ ಮನಕಲಕುವ ಘಟನೆ
Advertisement
Advertisement
ಇಂತಹ ಸ್ಥಿತಿಯಿಂದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೆಂದಾಳುಬೈಲು ಹೊರತಾಗಿಲ್ಲ. ಕುಂದಾದ್ರಿ ಬೆಟ್ಟದ ಬುಡದಲ್ಲಿ ಇರುವ ಪುಟ್ಟ ಗ್ರಾಮದಲ್ಲಿ ಪ್ರಾಥಮಿಕ ಶಾಲೆ ಇದೆ. ಇಲ್ಲಿನ ಬಹುತೇಕ ಮಂದಿ ಕೂಲಿ ಮಾಡಿ ಜೀವನ ನಡೆಸುವವರು. ಇವರು ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೂ ಹಿಂದೆ ಮುಂದೆ ನೋಡ್ತಾರೆ. ಅದರಲ್ಲೂ ಮಕ್ಕಳಿಗೆ ಮೊಬೈಲ್ ಕೊಡಿಸುವುದು ಆಗದ ಮಾತು. ಮೊಬೈಲ್ ಇದ್ದರೂ ನೆಟ್‍ವರ್ಕ್ ಇಲ್ಲ. ಮೊಬೈಲ್ ಚಾರ್ಜ್ ಮಾಡಲು ಪವರ್ ಇರುವುದಿಲ್ಲ. ಇದು ಇಲ್ಲಿನ ಸಮಸ್ಯೆ. ನಗರ ಭಾಗದ ಬಹುತೇಕ ಪೋಷಕರಿಗೆ ಆನ್‍ಲೈನ್ ಶಿಕ್ಷಣ ಮಾಡಿರುವುದು ಸಂತಸ ತಂದಿದೆ. ಮಕ್ಕಳಿಗೆ ಶಿಕ್ಷಣ ಸಿಗುತ್ತದೆ ಅನ್ನುವುದಕ್ಕಿಂತ, ಮಕ್ಕಳು ಮನೆಯಲ್ಲಿ ನೀಡುತ್ತಿದ್ದ ಕಾಟದಿಂದ ಬೇಸತ್ತು ಪೋಷಕರು ಒಪ್ಪಿಕೊಂಡಿದ್ದಾರೆ. ಆದರೆ ಶಿಕ್ಷಣದಿಂದ ವಂಚಿತರಾಗುವ ಭಯದಲ್ಲಿ ಮಲೆನಾಡಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪೋಷಕರು ಇದ್ದಾರೆ. ಇದನ್ನೂ ಓದಿ: ಮಗಳ ಆನ್‍ಲೈನ್ ಶಿಕ್ಷಣಕ್ಕಾಗಿ ಕಿವಿಯೊಲೆ ಮಾರಿದ ತಾಯಿ
Advertisement
ಅಷ್ಟಕ್ಕೂ ಆನ್‍ಲೈನ್ ಶಿಕ್ಷಣಕ್ಕೆ ಪವರ್ ಹಾಗೂ ಟವರ್ ಅತೀ ಮುಖ್ಯವಾಗಿದೆ. ಆದರೆ, ಮಲೆನಾಡಿನಲ್ಲಿ ಪವರ್ ಹಾಗೂ ಟವರ್ ಎರಡೂ ಇಲ್ಲ. ವಿದ್ಯುತ್ ಸಮಸ್ಯೆಯಿಂದಾಗಿ, ವಿದ್ಯಾರ್ಥಿಗಳು ಹೇಗೆ ಆನ್‍ಲೈನ್ ಕ್ಲಾಸ್ ನೋಡಲು ಸಾಧ್ಯವಾಗುತ್ತದೆ ಎಂದು ಪೋಷಕರು ಪ್ರಶ್ನಿಸುವಂತಾಗಿದೆ. ಮಲೆನಾಡಿನ ಭಾಗದಲ್ಲಿ ಮೊಬೈಲ್ ಟವರ್ ಗಳ ಸಮಸ್ಯೆ ವಿಪರೀತವಿದೆ. ಇದನ್ನೂ ಓದಿ: ಆನ್‍ಲೈನ್ ಕ್ಲಾಸ್‍ಗಾಗಿ ದಟ್ಟಾರಣ್ಯದಲ್ಲಿ ಟೆಂಟ್ ಹಾಕಿ ಕುಳಿತ ವಿದ್ಯಾರ್ಥಿಗಳು
ಇಲ್ಲಿ ಸಾಮಾನ್ಯವಾಗಿ ಫೋನ್ ನಲ್ಲಿ ಮಾತನಾಡಬೇಕಾದರೆ ಮನೆ ಮೇಲೆ ಹತ್ತಬೇಕು, ಮರ ಏರಬೇಕು ಇಲ್ಲವೇ ಸಮೀಪದ ಬೆಟ್ಟ ಹತ್ತುವ ಸ್ಥಿತಿ ಇದೆ. ಹೀಗಿರುವಾಗ ಶಿಕ್ಷಣದಿಂದ ವಂಚಿತರಾಗುವ ಭಯದಲ್ಲಿ ಮಲೆನಾಡಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂತಹ ಸ್ಥಿತಿಯಲ್ಲಿ ಮೊಬೈಲ್ ಇಂಟರ್ ನೆಟ್ ನೆಟ್‍ವರ್ಕ್ ದೊರೆಯುವುದು ಸಾಹಸವೇ ಸರಿ. ವಿದ್ಯಾಭ್ಯಾಸದ ಬಗ್ಗೆ ಅರಿವು ಇರುವುದರಿಂದ ಶಾಲೆಗೆ ಮಕ್ಕಳನ್ನು ಕಳುಹಿಸುತ್ತಾರೆ. ಆದರೆ ಅವರಿಗೆ ಮೊಬೈಲ್ ನೀಡುವ ಶಕ್ತಿ ಇರುವುದಿಲ್ಲ. ಅದಕ್ಕೆ ಪ್ರತಿ ತಿಂಗಳು ರೀಚಾರ್ಜ್ ಮಾಡಿಸಲು ಸಹ ಆಗುವುದಿಲ್ಲ. ಇಂತಹ ಸ್ಥಿತಿ ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಇದೆ. ಅದರಲ್ಲೂ ಆನ್‍ಲೈನ್ ಕ್ಲಾಸ್ ಗಳು ಸಾಮಾನ್ಯ ತರಗತಿಗಿಂತ ಭಿನ್ನವಾಗಿರುತ್ತವೆ. ಸಾಮಾನ್ಯ ತರಗತಿಯಲ್ಲಿ ಶಿಕ್ಷಕರು ಪಾಠ ಮಾಡಿದ ಮೇಲೆ ಅಲ್ಲಿಯೇ ಚರ್ಚೆ ನಡೆಸಬಹುದು. ಆನ್‍ಲೈನ್ ಕ್ಲಾಸ್ ನಲ್ಲಿ ಅವರು ಹೇಳಿದ್ದು, ಬೇಗ ಅರ್ಥವಾಗುವುದಿಲ್ಲ. ಪ್ರಶ್ನೆ ಕೇಳಲು ಸಹ ಆಗುವುದಿಲ್ಲ. ಇದರಿಂದ ಆನ್‍ಲೈನ್ ಕ್ಲಾಸ್ ಗಳನ್ನು ಮಲೆನಾಡಿನ ವಿದ್ಯಾರ್ಥಿಗಳು ಮತ್ತು ಪೋಷಕರು ಅಷ್ಟಾಗಿ ಇಷ್ಟಪಡುತ್ತಿಲ್ಲ.
ಒಟ್ಟಾರೆ ಆನ್‍ಲೈನ್ ಶಿಕ್ಷಣ ಎಂಬುದು ಎಲ್ಲರಿಗೂ ಅಲ್ಲ ಎಂಬುದು ಕೆಲವೇ ದಿನಗಳಲ್ಲಿಯೇ ತಿಳಿದು ಬಂದಿದ್ದು, ಮಲೆನಾಡು ಸೇರಿದಂತೆ, ಅದೆಷ್ಟೋ ಗ್ರಾಮಗಳ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಇದು ತಲೆನೋವಾಗಿ ಪರಿಣಮಿಸಿದೆ