ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದ 9 ಜನರನ್ನು ರಕ್ಷಿಸಿ ಸುರಕ್ಷಿತವಾಗಿ ದಡ ಸೇರಿಸಲಾಗಿದೆ.
ಕಳೆದ ಎರಡು ದಿನದ ಹಿಂದೆ ಎಂಆರ್ ಪಿಎಲ್ ಗೆ ಸೇರಿದ್ದ ಸಮುದ್ರದಲ್ಲಿ ಅಂಡರ್ ಗ್ರೌಂಡ್ ಪೈಪ್ ಜೋಡಿಸುವ ಕೋರಮಂಡಲ ಸಪೋರ್ಡರ್-9 ಎಂಬ ಟಗ್ ಸಮುದ್ರ ಮಧ್ಯೆ ಚಂಡಮಾರುತದ ಅಬ್ಬರಕ್ಕೆ ಸಿಲುಕಿತ್ತು.
Advertisement
Advertisement
9 ಮಂದಿಯ ರಕ್ಷಣೆಗೆ ಮುಂದಾದ ಜಿಲ್ಲಾಡಳಿತ ಇಂಡಿಯನ್ ಕೋಸ್ಟ್ ಗಾರ್ಡ್, ನೌಕಾದಳದ ಜಂಟಿ ಕಾರ್ಯಾಚರಣೆಯ ಮೂಲಕ ಇಂದು ಹೆಲಿಕಾಪ್ಟರ್ ಹಾಗೂ ಸ್ಪೀಡ್ ಬೋಟ್ ಮೂಲಕ ರಕ್ಷಣೆ ಮಾಡಲಾಗಿದೆ.ನಾಲ್ವರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಿ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಪಣಂಬೂರು ಎನ್ ಎಂಪಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗಿದೆ.
Advertisement
Advertisement
ಇನ್ನುಳಿದ 5 ಮಂದಿಯನ್ನು ಸ್ಪೀಡ್ ಮೂಲಕ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂದಾಯ ಸಚಿವ ಆರ್.ಅಶೋಕ್ ರಕ್ಷಿಸಲ್ಪಟ್ಟ ಟಗ್ ಸಿಬ್ಬಂದಿ ಜೊತೆ ಮಂಗಳೂರಿನ ಎನ್‍ಎಂಪಿಟಿ ಬಂದರ್ ನಲ್ಲಿ ಮಾತುಕತೆ ನಡೆಸಿದ್ರು. ದುರಂತದ ಮಾಹಿತಿ ಸಂಗ್ರಹಿಸಿ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ರು.