ಕಾರವಾರ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಚರಿಸಲಾಗುತ್ತಿರುವ ‘ಆಜಾದಿ ಕಾ ಅಮೃತ್ ಮಹೋತ್ಸವ’ದಲ್ಲಿ ದೇಶದಾದ್ಯಂತ ಭಾರತೀಯ ನೌಕಾಪಡೆಯಿಂದ 75 ದ್ವೀಪಗಳಲ್ಲಿ ಧ್ವಜಾರೋಹಣ ನಡೆಸಲಾಗಿದೆ. ಅದರಂತೆ ಕಾರವಾರದ ನೌಕಾನೆಲೆ ನಿರ್ಬಂಧಿತ ಅಂಜುದೀವ್ ದ್ವೀಪದಲ್ಲಿಯೂ ಕೂಡ ತ್ರಿವರ್ಣ ಧ್ವಜವನ್ನು ಹಾರಿಸಿ ಗೌರವ ಸಲ್ಲಿಸಲಾಯಿತು.
Advertisement
75ನೇ ವರ್ಷದ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ‘ಆಜಾದಿ ಕಾ ಅಮೃತ್ ಮಹೋತ್ಸವ’ ಎಂದು ಆಚರಿಸಲು ಕರೆ ನೀಡಲಾಗಿದೆ. ಭಾರತೀಯ ಸಶಸ್ತ್ರ ಪಡೆಗಳು ಮತ್ತು ಅರೆಸೇನಾ ಪಡೆಗಳು ದೇಶಾದ್ಯಂತ ‘ಅಜಾದಿ ಕಾ ಅಮೃತ್ ಮಹೋತ್ಸವ’ ಸರಣಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ನವದೆಹಲಿಯ ಕೊಠಾರಿ ಕ್ರೀಡಾಂಗಣದಲ್ಲಿ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರು ಈ ಕಾರ್ಯಕ್ರಮಗಳಿಗೆ ಶುಕ್ರವಾರ ಚಾಲನೆ ನೀಡಿದರು.
Advertisement
Advertisement
ಬಳಿಕ ಕಾರವಾರದ ಕದಂಬ ನೌಕಾನೆಲೆ ವ್ಯಾಪ್ತಿಯ ಕರ್ನಾಟಕ ನೌಕಾ ವಲಯದ ಫ್ಲ್ಯಾಗ್ ಆಫೀಸರ್ ಮಹೇಶ್ ಸಿಂಗ್ ಅಂಜುದೀವ್ ದ್ವೀಪದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಅಂಜುದೀವ್ ದ್ವೀಪವು ಭಾರತೀಯ ನೌಕಾಪಡೆಗೆ ರಕ್ಷಣೆಯ ದೃಷ್ಟಿಯಲ್ಲಿ ಪ್ರಮುಖವಾಗಿದೆ ಎಂದು ಹೇಳಿದರು.