ಮೈಸೂರು: ಜೆಡಿಎಸ್ ಪಕ್ಷದಿಂದ ದಿನ ದಿನಕ್ಕೂ ದೂರವಾಗುತ್ತಿರುವ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ, ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮಾತ್ರ ದಿನ ದಿನಕ್ಕೂ ಹೆಚ್ಚು ಹತ್ತಿರವಾಗುತ್ತಿದ್ದಾರೆ.
ಮೈಸೂರಿನಲ್ಲಿ ನಿತ್ಯ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಸರಣಿ ಸಭೆ ನಡೆಸುತ್ತಿರುವ ಜಿ.ಟಿ.ದೇವೇಗೌಡ, ಇಂದು ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಕುರಿತು ಸಭೆ ನಡೆಸಿದರು. ಮೈಸೂರು ಮಹಾನಗರ ಪಾಲಿಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರಿನ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಲಿಂಗಾಬುದಿ ಕೆರೆ, ವಿಜಯನಗರ ಒಳಚರಂಡಿ ಕಾಮಗಾರಿಗಳ ಬಗ್ಗೆ ಚರ್ಚಿಸಿದರು.
ತೋರಿಕೆ ಮಾಡುವವರಿಗೆ ಪಕ್ಷ ಸಂಘಟನೆಯ ಜವಾಬ್ದಾರಿ ಯಾಕೆ ಎಂದಿದ್ದ ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡುವ ರೀತಿ ಕ್ಷೇತ್ರದ ಅಭಿವೃದ್ಧಿಗಾಗಿಯೇ ಜಿಟಿಡಿ ಸಮಯ ಮೀಸಲಿಟ್ಟಂತೆ ಕಾಣುತ್ತಿದೆ. ಪಕ್ಷದಲ್ಲಿ ಶಕ್ತಿ ಕುಂದಿದರೂ ಕ್ಷೇತ್ರದಲ್ಲಿ ಶಕ್ತಿ ಕಾಪಾಡಿಕೊಳ್ಳಲು ಜಿಟಿಡಿ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ.