ಬೆಂಗಳೂರು: ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅವರ ಬಾಲ್ಯದ ಫೋಟೋವನ್ನು ಹಂಚಿಕೊಂಡ ನಟಿ ಅನುಪ್ರಭಾಕರ್ ಅವರಿಗೆ ಮೇಘನಾ ರಾಜ್ ಧನ್ಯವಾದ ತಿಳಿಸಿದ್ದಾರೆ.
ಅನುಪ್ರಭಾಕರ್ ಅವರು ತಮ್ಮ ಫೋಟೋದಲ್ಲಿ ಚಿರು, ಅರ್ಜುನ್ ಸರ್ಜಾ ಹಾಗೂ ಅವರ ಪತ್ನಿ ಜೊತೆಗಿದ್ದ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ಫೋಟೋವನ್ನು ಶೇರ್ ಮಾಡಿಕೊಂಡಿರುವ ಮೇಘನಾ, ಅತ್ಯಂತ ಅಮೂಲ್ಯವಾದ ಫೋಟೋ ಶೇರ್ ಮಾಡಿದ ಅನುಪ್ರಭಾಕರ್ ಅವರಿಗೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.
View this post on Instagram
ಇತ್ತ ತಮ್ಮ ಇನ್ ಸ್ಟಾ ಖಾತೆಯಲ್ಲಿ ಅಪರೂಪದ ಫೊಟೋದೊಂದಿಗೆ ಭಾವನಾತ್ಮಕ ಸಂದೇಶ ಬರೆದುಕೊಂಡಿರುವ ಅನು, ನನ್ನ ಅಕ್ಕ ನಿವೇದಿತಾ ಹಾಗೂ ಭಾವ ಅರ್ಜುನ್ ಸರ್ಜಾ ಅವರ ನಿಶ್ಚಿತಾರ್ಥದ ಫೋಟೋ. ಭಾವನ ತೊಡೆ ಮೇಲೆ ಚಿರು, ಅಕ್ಕನ ತೊಡೆ ಮೇಲೆ ನಾನು. ಇದೊಂದು ಬೆಲೆ ಕಟ್ಟಲಾಗದ ಫೋಟೋ. ಚಿರು ನೀನು ಎಲ್ಲಿದ್ದರೂ ಸಂತೋಷವಾಗಿ, ಶಾಂತವಾಗಿದ್ದೀಯ ಎಂಬ ವಿಶ್ವಾಸವಿದೆ ಎಂದು ಬರೆದಿದ್ದಾರೆ.
ಅನು ಪ್ರಭಾಕರ್ ಅವರು ಅಪರೂಪದ ಫೋಟೋ ಹಂಚಿಕೊಳ್ಳುವ ಮೂಲಕ ಚಿರಂಜೀವಿ ಸರ್ಜಾ ಅವರನ್ನು ನೆನೆಪು ಮಾಡಿಕೊಂಡಿದ್ದಾರೆ. ಇದಕ್ಕೆ ಐಶ್ವರ್ಯ ಅರ್ಜುನ್ ಹಾರ್ಟ್ ಎಮೋಜಿಯನ್ನು ಕಮೆಂಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ಫೋಟೋಗೆ ಸಾಕಷ್ಟು ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
View this post on Instagram
ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನ ಅವರ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿತ್ತು. ಇದೇ ಬೇಸರದಲ್ಲಿದ್ದ ಕುಟುಂಬಕ್ಕೆ ಇದೀಗ ಪುಟ್ಟ ಮಗುವಿನ ಆಗಮನದಿಂದ ಸಂತಸ ತಂದಿದೆ. ಮೇಘನಾ ಅವರು ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ. ಮೇಘನಾ ಅವರು ಅಕ್ಟೋಬರ್ 22 ರಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈಗಾಗಲೇ ತಮ್ಮ ನೆಚ್ಚಿನ ನಟನನ್ನು ಕಳೆದುಕೊಂಡಿರುವ ಅಭಿಮಾನಿಗಳು ಚಿರುಗೆ ಗಂಡು ಮಗುವಾಗುತ್ತಿದ್ದಂತೆಯೇ ಸಂತಸ ಮುಗಿಲುಮುಟ್ಟಿತ್ತು. ಅಲ್ಲದೆ ಅದಾಗಲೇ ಜ್ಯೂನಿಯರ್ ಚಿರು ಅಂತಾನೇ ಹೆಸರಿಟ್ಟಿದ್ದಾರೆ. ಮಗುವಿನಲ್ಲೇ ಚಿರುನನ್ನು ಕಾಣುತ್ತಿದ್ದಾರೆ.