ಬೆಂಗಳೂರು: ಪಕ್ಷದ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕ ಸಂಬಂಧ ವೀಕ್ಷಕರ ನೇಮಕ ಮಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ಈ ವಿಚಾರವಾಗಿ ಜಿಲ್ಲಾಧ್ಯಕ್ಷರು, ಶಾಸಕರುಗಳಿಗೆ ಸೂಚನೆ ನೀಡಿದ್ದು, ಅವರ ಅಭಿಪ್ರಾಯ ಪಡೆಯುತ್ತೇವೆ. ಒಂದೆರಡು ದಿನಗಳಲ್ಲಿ ವೀಕ್ಷಕರ ನೇಮಕ ಮಾಡಲಾಗುತ್ತದೆ ಎಂದರು.
ವೀಕ್ಷಕರುಗಳು ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲಿದ್ದಾರೆ. ಕೆಲವು ಕಡೆಗಳಲ್ಲಿ ಒಂದಷ್ಟು ವಿಚಾರಗಳನ್ನು ಇತ್ಯರ್ಥ ಮಾಡಬೇಕಿದೆ. ಅವುಗಳನ್ನು ಪರಿಶೀಲಿಸಿ ಸರಿಪಡಿಸುತ್ತೇನೆ. ನಾನು ಕೂಡ ಕೆಲವು ಕಡೆ ಹೋಗುತ್ತೇನೆ. ಅದಕ್ಕೆ ಮೊದಲು ಒಂದಷ್ಟು ವಿಚಾರಗಳನ್ನು ಅಂತಿಮಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕೊರೊನಾ ಮೂರನೇ ಅಲೆ ತಡೆಗೆ ಅಗತ್ಯ ವೈದ್ಯಕೀಯ ಸೌಲಭ್ಯ: ಅಶೋಕ್