ರಾಯಚೂರು: ಹೊಟ್ಟೆ ಪಾಡಿಗಾಗಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಬೀದಿಬದಿಯ ವ್ಯಾಪಾರಿಗಳ ಮೇಲೆ ದರ್ಪ ತೋರಿಸಿದ್ದ ಪಿಎಸ್‍ಐನ್ನು ಅಮಾನತು ಮಾಡಲಾಗಿದೆ.
ವೀಕೆಂಡ್ ಕರ್ಫ್ಯೂ ಹಿನ್ನೆಲೆ ನಗರದಲ್ಲಿ ಎಲ್ಲಾ ವ್ಯಾಪಾರ ವಹಿವಾಟುಗಳು ಬಂದ್ ಮಾಡಲಾಗಿತ್ತು. ನಗರದ ಚಂದ್ರಮೌಳೇಶ್ವರ ವೃತ್ತದ ಬಳಿ ಅಲ್ಲಲ್ಲಿ ವ್ಯಾಪಾರ ನಡೆಸುತ್ತಿದ್ದ, ತರಕಾರಿ ವ್ಯಾಪಾರಿಗಳನ್ನ ಪೊಲೀಸರು ಜಾಗ ಖಾಲಿ ಮಾಡಿಸುತ್ತಿದ್ದರು. ಈ ವೇಳೆ ಏಕಾಏಕಿ ಬಂದ ಪಿಎಸ್‍ಐ ಅಝಮ್ ತರಕಾರಿ ಹಾಗೂ ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ಮೆರೆದಿದ್ದರು. ಇದನ್ನೂ ಓದಿ: ವ್ಯಾಪಾರಿಗಳ ಮೇಲೆ ಖಾಕಿ ಖದರ್-ಕಾಲಿನಿಂದ ತರಕಾರಿ ಒದ್ದು ಪಿಎಸ್‍ಐ ದರ್ಪ
Advertisement
Advertisement
ವೀಕೆಂಡ್ ಕರ್ಫ್ಯೂ ನೆಪದಲ್ಲಿ ಬಡ ವ್ಯಾಪಾರಿಗಳ ಜೊತೆ ಒಬ್ಬ ಜವಾಬ್ದಾರಿಯುತ ಅಧಿಕಾರಿಯಾಗಿ ಅಸಭ್ಯ ವರ್ತನೆ ತೋರಿದ ಅಝಮ್‍ನನ್ನು ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಪ್ರಕಾಶ್ ನಿಕಮ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.
Advertisement
Advertisement
ಲಾಕ್‍ಡೌನ್ ಹಿನ್ನೆಲೆ ಕೆಲಸವಿಲ್ಲದೆ ಕಷ್ಟದಲ್ಲಿರುವ ಮಹಿಳೆಯರು, ವೃದ್ಧೆಯರು ಬೀದಿಬದಿಯಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದರು. ವೀಕೆಂಡ್ ಕರ್ಫ್ಯೂ ಕರ್ತವ್ಯ ನಿರ್ವಹಿಸುವ ನೆಪದಲ್ಲಿ ಬಡ ಮಹಿಳಾ ವ್ಯಾಪಾರಿಗಳ ಮೇಲೆ ರಾಯಚೂರಿನ ಸದರ ಬಜಾರ್ ಠಾಣೆ ಪಿಎಸ್‍ಐ ಅಝಮ್ ಎಂಬ ಪೊಲೀಸ್ ಅಧಿಕಾರಿ ತಮ್ಮ ಅಹಂಕಾರ ತೋರಿಸಿದ್ದರು.