ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವಿಷಯುಕ್ತ ತ್ಯಾಜ್ಯ ನದಿಗಳಿಗೆ ಹರಿಬಿಡುವ ಕಾರ್ಖಾನೆಗಳ ವಿರುದ್ಧ ಕ್ರಮ

Public TV
1 Min Read
ygr dc

ಯಾದಗಿರಿ: ವಡಗೇರಾ ತಾಲೂಕಿನ ಕೋರ್ ಗ್ರೀನ್ ಶುಗರ್ ಫ್ಯಾಕ್ಟರಿಯಿಂದ ವಿಷಯುಕ್ತ ತ್ಯಾಜ್ಯವನ್ನು ಕೃಷ್ಣಾ ನದಿಗೆ ಹರಿಬಿಟ್ಟ ಹಿನ್ನೆಲೆ, ನದಿಯ ಹಿನ್ನೀರಿನಲ್ಲಿ ಲಕ್ಷಾಂತರ ಮೀನುಗಳು ಸಾವನ್ನಪ್ಪಿದ್ದವು. ಈ ಬಗ್ಗೆ ‘ಪಬ್ಲಿಕ್ ಟಿವಿ ವೆಬ್‌ಸೈಟ್‌’ ನಲ್ಲಿ ಸುದ್ದಿ ಪ್ರಸಾರವಾಗಿತ್ತು. ಸುದ್ದಿಯಿಂದ ಎಚ್ಚೆತ್ತ ಜಿಲ್ಲಾಡಳಿತ ವಿಷಯುಕ್ತ ತ್ಯಾಜ್ಯವನ್ನು ನದಿ, ಹಳ್ಳ- ಕೊಳ್ಳಗಳಿಗೆ ಹರಿಬಿಡುವ ಕೆಮಿಕಲ್ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.

core green

Public Tv IMPACTಈ ಬಗ್ಗೆ ಇಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರ ಅಧ್ಯಕ್ಷತೆಯಲ್ಲಿ ಕಡೆಚೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿ ಮತ್ತು ಇತರೆ ಫ್ಯಾಕ್ಟರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿ ಮಾತನಾಡಿ, ಮಾಲಿನ್ಯಕಾರಕ ತ್ಯಾಜ್ಯವನ್ನು ಕಾರ್ಖಾನೆಗಳ ಬೇಜವಾಬ್ದಾರಿಯಿಂದ ಕೈಗಾರಿಕಾ ಪ್ರದೇಶದ ಸುತ್ತಲಿನ ನದಿಗಳಿಗೆ ಹರಿಸಲಾಗುತ್ತಿದೆ. ಇದರಿಂದಾಗಿ ಜನತೆ ತೀವ್ರ ಆತಂಕ ವ್ಯಕ್ತ ಪಡಿಸುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಸಕ್ಕರೆ ಕಾರ್ಖಾನೆಯ ವಿಷಪೂರಿತ ನೀರು ಕೃಷ್ಣಾ ನದಿ ಹೀನ್ನಿರಿಗೆ- ಲಕ್ಷಾಂತರ ಮೀನುಗಳು ಸಾವು

core green 2

ಅಲ್ಲದೆ ಕೈಗಾರಿಕಾ ಪ್ರದೇಶದಿಂದ ನದಿ, ಹಳ್ಳ-ಕೊಳ್ಳಗಳಿಗೆ ಹರಿದ ಕಲುಷಿತ ರಾಸಾಯನಿಕವನ್ನು ಜಲಚರ, ಪಶು-ಪಕ್ಷಿಗಳು ಸೇವಿಸಿ ನಾಶವಾಗುತ್ತಿವೆ. ಹೀಗಾಗಿ ಮಾಲಿನ್ಯ ಎಸಗುತ್ತಿರುವ ಟೈರ್ ಘಟಕ, ಶುಗರ್ ಫ್ಯಾಕ್ಟರಿ ವಿರುದ್ಧ ಕೂಡಲೇ ಕಾನೂನು ಪ್ರಕಾರ ಕ್ರಮ ತೆಗೆದುಕೊಂಡು ಘಟಕವನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *