ಬಳ್ಳಾರಿ: ಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯಕ್ ಮೇಲೆ ಪ್ರಕರಣ ದಾಖಲಾಗಿದೆ.
ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರದಲ್ಲಿ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರ ನಾಯಕ್ ಅವರ ಪುತ್ರನ ಮದುವೆಯ ಹಿನ್ನೆಲೆಯಲ್ಲಿ ಕೋವಿಡ್ 19 ಮಾರ್ಗದರ್ಶಿ ನಿಯಮಗಳ ಉಲ್ಲಂಘನೆ ಆಧಾರದ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.
Advertisement
Advertisement
50ಕ್ಕಿಂತ ಹೆಚ್ಚು ಜನರು ಮದುವೆಯಲ್ಲಿ ಪಾಲ್ಗೊಳ್ಳಬಾರದು ಎಂಬ ನಿಯಮವಿದೆ. ಆದರೆ ಈ ನಿಯಮವನ್ನು ಪರಮೇಶ್ವರ್ ನಾಯ್ಕ್ ಮಗನ ಆರತಕ್ಷತಾ ಕಾರ್ಯಕ್ರಮದಲ್ಲಿ ಉಲ್ಲಂಘಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement
ಮದುವೆಯಲ್ಲಿ ಕಾನೂನು ಉಲ್ಲಂಘನೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಶಾಸಕರು, ನನ್ನ ಮಗನ ಮದುವೆಗೆ ಕಡಿಮೆ ಜನ ಬನ್ನಿ ಎಂದು ಮನವಿ ಮಾಡಿದ್ದೆ. ಆದರೆ ನನ್ನ ಮೇಲಿನ ಪ್ರೀತಿಯಿಂದ ಜನರು ಜಾಸ್ತಿ ಬಂದಿದ್ದಾರೆ. ಹಾಗಂತ ಜನರು ಬರುವುದನ್ನು ತಡೆಯಲು ಸಾಧ್ಯವಾಗುತ್ತಾ ಎಂದು ಪ್ರಶ್ನಿಸಿದ್ದಾರೆ.
ಎಲ್ಲರಿಗೂ ಮಾಸ್ಕ್ ಸ್ಯಾನಿಟೈಜರ್, ಥರ್ಮಲ್ ಸ್ಕಾನಿಂಗ್ ಮಾಡಲು ಹೇಳಿದ್ದೆ. ಆದರೆ ಜನ ಜಾಸ್ತಿಯಾದ ಹಿನ್ನೆಲೆ ಏನು ಮಾಡಲು ಸಾಧ್ಯವಾಗಲಿಲ್ಲ. ಕೋವಿಡ್ ಸಮಯದಲ್ಲಿ ಇಷ್ಟೊಂದು ಜನ ಸೇರಬಾರದು ಎಂದು ಮನವಿ ಮಾಡಿಕೊಂಡಿದ್ದೆ ಎಂದರು.
ಇದೇ ವೇಳೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ಇಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವರು, ನನಗೂ ಪೊಲೀಸರು ನೋಟಿಸ್ ನೀಡಿದ್ದಾರೆ. ನಾನು ಯಾರ ಮೇಲೆ ಏನು ಹೇಳೋಲ್ಲ, ಯಾರ ಮೇಲೂ ಆರೋಪ ಕೂಡ ಮಾಡಲ್ಲ ಎಂದು ಅವರು ತಿಳಿಸಿದರು.