ಯಾದಗಿರಿ: ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಸಂಯೋಗದೊಂದಿಗೆ, ರಾಜ್ಯದ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಉಚಿತ ಟ್ಯಾಬ್ ನೀಡಲಾಯಿತು.
ಜ್ಞಾನ ದೀವಿಗೆ ಯೋಜನೆ ಮೊದಲ ಹಂತದಲ್ಲಿ ಮೊಟ್ಟ ಮೊದಲ ಬಾರಿಗೆ, ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಹತ್ತಿಕುಣಿಯ ಸರ್ಕಾರಿ ಪ್ರೌಢಶಾಲೆ ಆಯ್ಕೆಯಾಗಿದೆ. ಇಂದು ಪಬ್ಲಿಕ್ ಟಿವಿ ಜ್ಞಾನ ದೀವಿಗೆ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆ ಪಬ್ಲಿಕ್ ಟಿವಿ ಕ್ಯಾಪ್ಟನ್ ಹೆಚ್.ಆರ್ ರಂಗನಾಥ್ ಮತ್ತು ರೋಟರಿ ಕ್ಲಬ್ ಅಧ್ಯಕ್ಷರು ಚಾಲನೆ ನೀಡಿದ್ದರು.
Advertisement
Advertisement
ಇದರ ಪ್ರಯುಕ್ತ ಹತ್ತಿಕುಣಿ ಶಾಲೆಯಲ್ಲಿ ಸಾಂಕೇತಿಕವಾಗಿ ಮಕ್ಕಳಿಗೆ ಪಠ್ಯ ಪುಸ್ತಕ ಸಂಗ್ರಹಿಸಿದ ಟ್ಯಾಬ್ ನೀಡಲಾಯಿತು. ಈ ಶಾಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಹತ್ತನೆಯ ತರಗತಿಯಲ್ಲಿ, ಸುಮಾರು 86 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಪ್ರತಿ ಎರಡು ವಿದ್ಯಾರ್ಥಿಗಳಿಗೆ ಒಂದು ಟ್ಯಾಬ್ ನಂತೆ 43 ಮೂರು ಟ್ಯಾಬ್‍ಗಳನ್ನು ವಿತರಣೆ ಮಾಡಲಾಯಿತು.
Advertisement
Advertisement
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ರೋಟರಿ ಕ್ಲಬ್ ಅಸಿಸ್ಟೆಂಟ್ ಗೌರ್ನರ್ ಮುರಳೀಧರ್ ಮಾಗನೂರ, ರೋಟರಿ ಮಿಟೌನ್ ಪ್ರೆಸಿಡೆಂಟ್ ಸುಧಾ ಹಲ್ಕಾಯಿ, ರೋಟರಿ ಕ್ಲಬ್ ಯಾದಗಿರಿ ಅಧ್ಯಕ್ಷರು ಸಿ.ಎಂ ಪಾಟೀಲ್, ಶ್ರೀನಿವಾಸ್ ರೆಡ್ಡಿ, ಬಿಇಒ ಚಂದ್ರಕಾಂತ್, ಶಾಲಾ ಮುಖ್ಯ ಶಿಕ್ಷಕಿ ಲತಾ ಭಾಗವಹಿಸಿದ್ದರು.
ಡಿಡಿಪಿಐ ಶ್ರೀನಿವಾಸ್ ರೆಡ್ಡಿ ಮತ್ತು ರೋಟರಿ ಕ್ಲಬ್ ಅಸಿಸ್ಟೆಂಟ್ ಗೌರ್ನರ್ ಮುರಳೀಧರ್ ಮಾತನಾಡಿ ಪಬ್ಲಿಕ್ ಟಿವಿಗೆ ಧನ್ಯವಾದ ತಿಳಿಸಿದರು.