ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಮತ್ತು ಬೆಂಗಳೂರು ಗಲಭೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ಮಾಜಿ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಸೇರಿದ್ದು, ಜೈಲಿನಲ್ಲಿ ಆರೋಪಿಗೆ ರಾಜಾತಿಥ್ಯ ನೀಡಿರುವ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.
Advertisement
ಕೊರೊನಾ ಹಿನ್ನೆಲೆ ಜೈಲು ಸೇರುವ ಹೊಸ ಆರೋಪಿ 14 ದಿನ ಕ್ವಾರಂಟೈನ್ ನಲ್ಲಿರಬೇಕು. ಆದ್ರೆ ಸಂಪತ್ ರಾಜ್ ಗಾಗಿ ನಿಯಮ ಸಡಿಲಿಕೆ ಮಾಡಿ ನೇರವಾಗಿ ಕೊಠಡಿಗೆ ಶಿಫ್ಟ್ ಮಾಡಲಾಗಿದೆ. ಪೊಲೀಸ್ ಠಾಣೆಯೊಂದರ ಸಿಬ್ಬಂದಿಯೇ ಸಂಪತ್ ರಾಜ್ ಗೆ ಹೊಸ ಹಾಸಿಗೆ, ದಿಂಬು ಮತ್ತು ಬೆಡ್ ಶೀಟ್ ನೀಡಿರುವ ಬಗ್ಗೆ ತಿಳಿದು ಬಂದಿದೆ.
Advertisement
Advertisement
ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಶುಕ್ರವಾರ ಸಂಪತ್ ರಾಜ್‍ರನ್ನು ಸಿಸಿಬಿ ಪೊಲೀಸರು ಬೆಂಗಳೂರಿನ 67ನೇ ಸಿಸಿಎಚ್ ಕೋರ್ಟ್‍ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್, ಸಂಪತ್ ರಾಜ್‍ರನ್ನು ನವೆಂಬರ್ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
Advertisement