– ಆತ್ಮಹತ್ಯೆಗೆ ಶರಣಾದ್ರಾ ಪ್ರೇಮಿಗಳು..?
ಹಾಸನ: ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ಬೈಕ್ ನಿಲ್ಲಿಸಿ ಪ್ರೇಮಿಗಳು ನಾಪತ್ತೆಯಾಗಿದ್ದರು. ಇದೀಗ ಇಬ್ಬರ ಮೃತದೇಹ ಪತ್ತೆಯಾಗಿದೆ. ಈ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ನವೆಂಬರ್ 16 ರಂದು ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಯುವ ಪ್ರೇಮಿಗಳ ಮೃತದೇಹ ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದೆ. ಒಬ್ಬರನ್ನೊಬ್ಬರು ಬಟ್ಟೆಯಿಂದ ಕಟ್ಟಿಕೊಂಡು ನಾಲೆಗೆ ಜಿಗಿದಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಸುಶ್ಮಿತ(18) ಹಾಗೂ ರಮೇಶ್(19) ಎಂದು ಗುರುತಿಸಲಾಗಿದೆ. ಹಿರೀಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ ನಾಲೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಪ್ರೇಮಿಗಳಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಮನೆಯವರ ವಿರೋಧಕ್ಕೆ ಹೆದರಿ ಆತ್ಮಹತ್ಯೆಗೆ ಶಾರಣಾಗಿರಬಹುದು ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೇ ಪ್ರೇಮಿಗಳು ತಾವೇ ಆತ್ಮಹತ್ಯೆಗೆ ಶರಣಾಗಿದ್ದಾರೋ ಅಥವಾ ಯಾರಾದರೂ ಕೊಲೆ ಮಾಡಿ ನಾಲೆಗೆ ಎಸೆದಿದ್ದಾರೋ ಎಂಬ ಅನುಮಾನವೂ ವ್ಯಕ್ತವಾಗುತ್ತಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನೋಣವಿನಕರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.