– ಸಿಎಂ ಬೊಮ್ಮಾಯಿ ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧಾರ
ಬೆಂಗಳೂರು: ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಂತೆ ಎಸ್‍ಟಿಪಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಪ್ರತ್ಯೇಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆ ಮಾಡಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.
ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ನಡೆಯಿತು. ಇದನ್ನೂ ಓದಿ : ಹೈಕಮಾಂಡ್ ನನ್ನ ರಕ್ತ ತೆಗೆದುಕೊಳ್ಳಿ- ಕೈ ಕುಯ್ದುಕೊಂಡ ವಿಜಯೇಂದ್ರ ಅಭಿಮಾನಿ
ಕ್ಯಾಬಿನೆಟ್ ಸಭೆಯ ನಿರ್ಧಾರಗಳು:
ಎಲ್ಲ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಭೇಟಿ ನೀಡಿ ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ತೀರ್ಮಾನಿಸಲಾಯಿತು. ಅವರು ಆ ಜಿಲ್ಲೆಗಳಿಗೆ ಭೇಟಿ ನೀಡಿ, ಕೋವಿಡ್ ಸ್ಥಿತಿಗತಿ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿ, ಹೆಚ್ಚಿನ ಪರಿಹಾರ ಕ್ರಮಗಳ ಅಗತ್ಯವಿದ್ದರೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಕೋವಿಡ್ ಟಾಸ್ಕ್ ಫೋರ್ಸ್ ಪುನಾರಚನೆ ಮಾಡಲು ತೀರ್ಮಾನಿಸಲಾಯಿತು. ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಗಳ ಮೇಲ್ವಿಚಾರಣೆಯಲ್ಲಿ ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣ ಯೋಜನೆಗಳ ಅನುಷ್ಠಾನಕ್ಕೆ ತೀರ್ಮಾನ.