Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಿಷ್ಕೃತ ರೂಪದಲ್ಲಿ ವಿದ್ಯಾಗಮ, ಇದು ಶಾಲಾರಂಭವಲ್ಲ- ಸುರೇಶ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪರಿಷ್ಕೃತ ರೂಪದಲ್ಲಿ ವಿದ್ಯಾಗಮ, ಇದು ಶಾಲಾರಂಭವಲ್ಲ- ಸುರೇಶ್ ಕುಮಾರ್

Bengaluru City

ಪರಿಷ್ಕೃತ ರೂಪದಲ್ಲಿ ವಿದ್ಯಾಗಮ, ಇದು ಶಾಲಾರಂಭವಲ್ಲ- ಸುರೇಶ್ ಕುಮಾರ್

Public TV
Last updated: December 15, 2020 6:24 pm
Public TV
Share
3 Min Read
vidyagama 1 e1602319808816
SHARE

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದಾಗಿ ಶಾಲಾರಂಭ ತಡವಾದ ಹಿನ್ನೆಲೆಯಲ್ಲಿ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೀತಿಯಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು  ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕಳೆದ ಆಗಸ್ಟ್ 8 ರಿಂದ ಆರಂಭಿಸಲಾಗಿದ್ದ ವಿದ್ಯಾಗಮವನ್ನು ಅಕ್ಟೋಬರ್ 10 ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ವಿದ್ಯಾಗಮ ಆರಂಭಿಸಿದ್ದರಿಂದ ಮಕ್ಕಳು ಶಾಲೆಯಿಂದ ದೂರ ಉಳಿಯುವುದು, ಗ್ರಾಮೀಣ ಪ್ರದೇಶದಲ್ಲಿ ಪೋಷಕರೊಂದಿಗೆ ಶಾಲಾ ಸಮಯದಲ್ಲಿ ಕೆಲಸಗಳಿಗೆ  ತೆರಳುವುದು, ಬಾಲ್ಯ ವಿವಾಹ, ಬಾಲ್ಯ ಕಾರ್ಮಿಕ ಪದ್ಧತಿಯಂತಹ ಪಿಡುಗುಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಅನುವಾಗಿತ್ತು ಎಂದು ಅವರು ತಿಳಿಸಿದ್ದಾರೆ.

ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ವಿದ್ಯಾಗಮವನ್ನು ಉಚ್ಚನ್ಯಾಯಾಲಯದ ಅಪೇಕ್ಷೆಯನುಸಾರ ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೂಪದಲ್ಲಿ ಅನುಷ್ಠಾನಗೊಳಿಸಲು ಇಲಾಖೆ ಮುಂದಾಗಿದ್ದು ಹಲವಾರು ಸುಧಾರಣೆಗಳನ್ನು ಕೈಗೊಂಡಿದೆ.

vidyagama 5 e1602319770821

ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಆವರಣದಲ್ಲಿ ವಿದ್ಯಾಗಮ ಕಾರ್ಯಕ್ರಮವು ನಡೆಯಲು ಅನುವು ಮಾಡಿಕೊಡಲಾಗಿದೆ. ಪ್ರಸ್ತುತ ಇರುವ ಆನ್ಲೈನ್, ಚಂದನಾ ವಾಹಿನಿಯ ಪಾಠಗಳು ಎಂದಿನಂತೆ ಮುಂದುವರೆಯಲಿವೆ. ಅರ್ಧ ದಿನ ಮಕ್ಕಳು ಮಾಸ್ಕ್ ಧರಿಸಿ ಶಾಲಾವರಣಕ್ಕೆ ಬಂದು ಸಾಮಾಜಿಕ ಅಂತರದೊಂದಿಗೆ ಕುಳಿತು ಪಾಠ ಕಲಿಯಬಹುದಾಗಿದೆ. ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದ್ದು, ಪ್ರತಿ ಶಾಲೆಯಲ್ಲಿ ಮಕ್ಕಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲಾಗುತ್ತದೆ. ಜ್ವರ, ಕೆಮ್ಮು, ನೆಗಡಿ ಲಕ್ಷಣಗಳು ಮತ್ತು ಕೋವಿಡ್-19ರ ಲಕ್ಷಣಗಳಿರುವ ವಿದ್ಯಾರ್ಥಿಗಳು ಬರುವಂತಿಲ್ಲ. ಸ್ಯಾನಿಟೈಸರ್, ಸೋಪ್ ಇತರೆ ನೈರ್ಮಲೀಕರಣ ವ್ಯವಸ್ಥೆ ಮಾಡಿಕೊಳ್ಳುವುದು.

ಮಕ್ಕಳನ್ನು ಲಭ್ಯ ಶಿಕ್ಷಕರ ಸಂಖ್ಯೆ, ಲಭ್ಯ ಕೊಠಡಿಗಳ ಅನುಸಾರವಾಗಿ 15-20 ವಿದ್ಯಾರ್ಥಿಗಳ ತಂಡ ರಚಿಸುವುದು. ಆಯಾ ಸ್ತರದ  ಸ್ಥಳೀಯ ಸಂಸ್ಥೆಗಳು ಸ್ಯಾನಿಟೈಸೇಷನ್ ಜವಾಬ್ದಾರಿ ತೆಗೆದುಕೊಳ್ಳಲಿದ್ದು, ಮಕ್ಕಳು ಕುಡಿಯಲು ನೀರನ್ನು ತಮ್ಮೊಂದಿಗೆ ಮನೆಯಿಂದಲೇ ತರಲು ಸಲಹೆ ನೀಡಬಹುದು. ಅಗತ್ಯ ಬಿದ್ದಾಗ ಸ್ಥಳೀಯ ಆರೋಗ್ಯ ಇಲಾಖೆಯ ಸಹಕಾರ ಪಡೆಯಲು ಅವಕಾಶವಿದೆ. ಇದೇ ರೀತಿಯ ಹತ್ತು ಹಲವು ಕಟ್ಟುನಿಟ್ಟಿನ  ಕ್ರಮಗಳೊಂದಿಗೆ ವಿದ್ಯಾಗಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ  ಎಂದು ಸಚಿವರು ತಿಳಿಸಿದ್ದಾರೆ.

ಕೋವಿಡ್ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ವಹಿಸಿಕೊಳ್ಳಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ವಿದ್ಯಾಗಮದ ಅನುಷ್ಠಾನಾಧಿಕಾರಿಗಳಾಗಿದ್ದಾರೆ. ವಿದ್ಯಾಗಮ ತರಗತಿಗಳು ಪಾಳಿಗಳಲ್ಲಿ ಅಂದರೆ ಬೆಳಗ್ಗೆ 45 ನಿಮಿಷದ  3 ತರಗತಿಗಳು ಮತ್ತು ಮಧ್ಯಾಹ್ನದ ಪಾಳಿಯಲ್ಲಿ 3 ತರಗತಿಗಳನ್ನು ನಡೆಸಲಾಗುತ್ತದೆ.  ಒಂದು ದಿನಕ್ಕೆ 7ರಿಂದ 8 ತಂಡಗಳಲ್ಲಿ ವಿದ್ಯಾರ್ಥಿಗಳಿಗೆ ಬರಲು ಸೂಚಿಸಲಾಗುತ್ತಿದೆ.

vidyagama

ಇದು ಶಾಲಾರಂಭವಲ್ಲ: ವಿದ್ಯಾಗಮವು ಶಾಲೆಯ ಆರಂಭವಲ್ಲ. ಒಮ್ಮೆಗೆ ಅತಿ ಕಡಿಮೆ ಸಂಖ್ಯೆಯ ಮಕ್ಕಳ ತಂಡದೊಂದಿಗೆ ಶಾಲಾವರಣದಲ್ಲಿ ಲಭ್ಯವಿರುವ ಸ್ಥಳದಲ್ಲಿ ಅನುಕೂಲಕ್ಕೆ ತಕ್ಕಂತೆ ಪಾಠಗಳು ನಡೆಯುತ್ತವೆ. ತಜ್ಞರ ಸಮಿತಿಯ ಶಿಫಾರಸಿನನ್ವಯ ವೈಜ್ಞಾನಿಕವಾಗಿ ತರಗತಿಗಳು ನಡೆಯುತ್ತಿದ್ದು, ಎಲ್ಲ ರೀತಿಯ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳು-ಎಸ್ಒಪಿ ಆಧಾರದಲ್ಲಿ ಕೈಗೊಳ್ಳಲಾಗುತ್ತದೆ. ಮಕ್ಕಳು ತರಗತಿ ಪಾಠಗಳಿಗೆ ಹಾಜರಾದಂತೆ ಎಲ್ಲರೂ ಒಂದೇ ಬಾರಿಗೆ ಬರುತ್ತಿಲ್ಲ. ಆಯಾ ಪ್ರದೇಶದ ಮಾರ್ಗದರ್ಶಿ ಶಿಕ್ಷಕರು ತಮಗೆ ಸನಿಹದ ನೆರೆಹೊರೆಯ ಕೆಲವೇ ಮಕ್ಕಳನ್ನು ತಂಡದಲ್ಲಿ ಪಟ್ಟಿ ಮಾಡುತ್ತಾರೆ. ಇದು ಶಾಲಾರಂಭವಲ್ಲ ಎಂಬುದನ್ನು ಪೋಷಕರು ಮನಗಾಣಬೇಕು ಎಂದು ಸಚಿವರು ಹೇಳಿದ್ದಾರೆ.

ವಿದ್ಯಾಗಮ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಆನ್-ಲೈನ್ ಶಿಕ್ಷಣ ವಂಚಿತರಿಗೆ ಅನುಕೂಲವಾಗಿದೆ. ಕಡ್ಡಾಯ ಶಿಕ್ಷಣ ಕಾಯ್ದೆಯು ಯಾವುದೇ ವಿದ್ಯಾರ್ಥಿಯ ಕಲಿಕೆಯನ್ನು ಹಕ್ಕಾಗಿ ಪರಿಗಣಿಸುತ್ತದೆ. ವಿದ್ಯಾರ್ಥಿಗಳಿಗೆ ಯಾವುದೇ ವಾತಾವರಣದಲ್ಲಿಯೂ ಶಿಕ್ಷಣವನ್ನು ನೀಡುವುದು  ಸರ್ಕಾರದ ಜವಾಬ್ದಾರಿಯಾದ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಗಳಿಗೆ ಕಡ್ಡಾಯವಾಗಿ ದಾಖಲಾಗಬೇಕಿದೆ ಹಾಗೆಯೇ   ಅವರ ಕಲಿಕೆ ನಿರಂತರವಾಗಿರಬೇಕಿರುವಂತೆ ನೋಡಿಕೊಳ್ಳಬೇಕಿದೆ ಎಂದು ಅವರು ಹೇಳಿದ್ದಾರೆ.

Vidyagama Project 1

ಗ್ರಾಮೀಣ ಖಾಸಗಿ ಶಾಲೆಗಳ ಆಸಕ್ತಿ: ವಿದ್ಯಾಗಮ ತರಗತಿಗಳನ್ನು ಸರ್ಕಾರದ ಮಾರ್ಗದರ್ಶಿ ಸೂತ್ರದ ಪ್ರಕಾರ ಗ್ರಾಮೀಣ ಪ್ರದೇಶದ ಖಾಸಗಿ ಶಾಲೆಗಳು ವಿಶೇಷವಾಗಿ ಬಜೆಟ್ ಶಾಲೆಗಳು ತಮ್ಮ ಪರಿಸರದಲ್ಲಿ ಆರಂಭಿಸಿ ತಮ್ಮ ಶಾಲೆಯ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಬಹುದಾಗಿದೆ. ಅದು ವಿದ್ಯಾಗಮವೇ ಆಗಿರಬಹುದು ಇಲ್ಲವೇ ಅವಕಾಶವಿದ್ದಲ್ಲಿ ಈಗಾಗಲೇ ಹೊರಡಿಸಿರುವ ಸುತ್ತೋಲೆಯನ್ವಯ ಆನ್-ಲೈನ್ ಮೂಲಕವೂ ವಿದ್ಯಾರ್ಥಿಗಳೊಂದಿಗೆ ಸಂಪರ್ಕವೇರ್ಪಡಿಸಬಹುದಾಗಿದೆ.  ಯಾವುದೇ ಶಾಲೆಗಳು ಲಭ್ಯವಿರುವ ಸಂಪನ್ಮೂಲಗಳಲ್ಲಿ ಒಟ್ಟಾರೆಯಾಗಿ ಮಕ್ಕಳ ಕಲಿಕೆಯ ಜವಾಬ್ದಾರಿಯನ್ನು ನಿರ್ವಹಿಸಲು ಸಾಧ್ಯವಿದ್ದು, ಮಕ್ಕಳ ಹಿತವನ್ನು ಕಾಪಾಡಬೇಕಿದೆ ಎಂದು ಎಂದು ಸಚಿವರು ಹೇಳಿದ್ದಾರೆ.

ಮಕ್ಕಳ ಕಲಿಕಾ ನಿರಂತರತೆಗೆ ವಿದ್ಯಾಗಮವು ಅನುಕೂಲವಾಗಿದ್ದು, ಶಿಕ್ಷಕರು ಮತ್ತು ಪೋಷಕರಲ್ಲಿ ಒಳ್ಳೆಯ ಭಾವನೆ ಮೂಡಿಸಿದೆ. ಮಕ್ಕಳ ಹಿತದೃಷ್ಟಿಯಿಂದ ವಿದ್ಯಾಗಮ ಕಾರ್ಯಕ್ರಮದ ರೂಪುರೇಷೆಗಳನ್ನು ಪರಿಷ್ಕರಿಸಿ ಪುನರಾರಂಭಿಸಲು ಇಲಾಖೆ ಎಲ್ಲ ರೀತಿಯಲ್ಲೂ ಸಿದ್ಧತೆ  ಮಾಡಿಕೊಂಡಿದ್ದು, ಶೀಘ್ರವೇ ಪುನರಾರಂಭಿಸಲಾಗುವುದು. ಒಟ್ಟಾರೆ ಪ್ರತಿಯೊಬ್ಬರೂ ನಮ್ಮ ಮಕ್ಕಳ ಹಿತದೃಷ್ಟಿಯಿಂದ ಮಕ್ಕಳ ಕಲಿಕಾ ನಿರಂತರತೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಾದ ಅಗತ್ಯವಿದೆ  ಎಂದು ಅವರು ತಿಳಿಸಿದ್ದಾರೆ.

TAGGED:CoronaCorona VirusCovid19karnatakasuresh kumarVidyagamaಕೊರೊನಾಕೊರೊನಾ ವೈರಸ್ಕೋವಿಡ್ 19ವಿದ್ಯಾಗಮಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Channapatna Gas Cylinder Theft
Crime

ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ

Public TV
By Public TV
22 minutes ago
Gas Auto LPG
Districts

ಎಲ್‌ಪಿಜಿ ಗ್ಯಾಸ್‌ ದರ ಏರಿಕೆ, ವಿತರಣೆಯೂ ಇಲ್ಲ – ಆಟೋ ಚಾಲಕರ ಪರದಾಟ

Public TV
By Public TV
33 minutes ago
NCERT Textbook Row
Court

ಎನ್‌ಸಿಇಆರ್‌ಟಿ ಪುಸ್ತಕದಲ್ಲಿ ನ್ಯಾಯಂಗಕ್ಕೆ ಅಪಮಾನ ಆರೋಪ – ಎಲ್ಲ ಪುಸ್ತಕಗಳ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

Public TV
By Public TV
39 minutes ago
Rohini Sindhuri MSME
Bengaluru City

ಹೊಸ MSME ನೀತಿಯಲ್ಲಿ ಎಐ, ಡಿಜಿಟಲ್ ಮಾರ್ಗಸೂಚಿ ಅಳವಡಿಸಲು ಚಿಂತನೆ: ರೋಹಿಣಿ ಸಿಂಧೂರಿ

Public TV
By Public TV
48 minutes ago
chalavadi narayanaswamy 1
Bengaluru City

ರಾಜ್ಯ ಸರ್ಕಾರದಿಂದ ವಿದ್ಯಾವಂತರಿಗೆ ವಂಚನೆ – ಛಲವಾದಿ

Public TV
By Public TV
52 minutes ago
Legislative Assembly Siddaramaiah
Bengaluru City

ವಿಧಾನಸಭೆಯಲ್ಲಿ ಗ್ಯಾಸ್ ಸಮರ; ಬಿಜೆಪಿ, ಕಾಂಗ್ರೆಸ್ ಗದ್ದಲ – ಕೇಂದ್ರ ಕಾರಣ ಎಂದು ಸಿಎಂ ಕಿಡಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?