ಬೆಂಗಳೂರು: ಕೊರೊನಾ ಮಧ್ಯೆ ಗಣೇಶ ಹಬ್ಬದ ಪ್ರಯುಕ್ತ ಕನ್ನಡ ಚಿತ್ರರಂಗದ ನಟ-ನಟಿಯರು, ನಿರ್ದೇಶಕರು ತಮ್ಮ ಅಭಿಮಾನಿಗಳಿಗೆ ಶುಭಕೋರಿದ್ದಾರೆ. ಜೊತೆಗೆ ತಮ್ಮ ಮನೆಯಲ್ಲಿ ಪರಿಸರ ಸ್ನೇಹಿ ಗಣೇಶನ ವಿಗ್ರಹ ಕೂರಿಸಿ ಪೂಜೆ ಮಾಡುತ್ತಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ತಮ್ಮ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ. “ಶ್ರೀ ಗೌರಿ ಸುತನಾದ ಶ್ರೀ ಸಿದ್ಧಿ ವಿನಾಯಕನು, ನಿಮ್ಮ ಜೀವನದ ಎಲ್ಲಾ ಅಡೆತಡೆಗಳನ್ನು ದೂರಗೊಳಿಸಿ, ಮಂಗಳಕರ ಆರಂಭವನ್ನು ನೀಡಲೆಂದು ಹಾರೈಸುತ್ತೇನೆ. ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳನ್ನು ಬಳಸಿ ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಿ” ಎಂದು ಹಬ್ಬಕ್ಕೆ ವಿಶ್ ಮಾಡಿದ್ದಾರೆ.
Advertisement
ಶ್ರೀ ಗೌರಿ ಸುತನಾದ ಶ್ರೀ ಸಿದ್ದಿ ವಿನಾಯಕನು, ನಿಮ್ಮ ಜೀವನದ ಎಲ್ಲಾ ಅಡೆತಡೆಗಳನ್ನು ದೂರಗೊಳಿಸಿ, ಮಂಗಳಕರ ಆರಂಭವನ್ನು ನೀಡಲೆಂದು ಹಾರೈಸುತ್ತೇನೆ. ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು!! ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳನ್ನು ಬಳಸಿ ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಿ. pic.twitter.com/enuemX7Wi5
— Darshan Thoogudeepa (@dasadarshan) August 21, 2020
Advertisement
ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಹ ಗಣೇಶ ಹಬ್ಬಕ್ಕೆ ವಿಶೇಷವಾಗಿ ವಿಶ್ ಮಾಡಿದ್ದಾರೆ. ಅಲ್ಲದೇ ಪುತ್ರ ವಿನೀಶ್ ಜೊತೆ ಚಿಕ್ಕ ಗಣೇಶನ ವಿಗ್ರಹವನ್ನು ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋವನ್ನು ಟ್ವಿಟ್ಟರಿನಲ್ಲಿ ಹಂಚಿಕೊಳ್ಳುವ ಮೂಲಕ ವಿಜಯಲಕ್ಷ್ಮಿ ಪರಿಸರ ಸ್ನೇಹಿ ಗಣೇಶನ ಬಳಕೆಗೆ ಬೆಂಬಲ ಸೂಚಿಸಿದ್ದಾರೆ.
Advertisement
Advertisement
ವಿಜಯಲಕ್ಷ್ಮಿ ಸ್ವತಃ ತಾವೇ ತಯಾರಿಸುವ ಗಣೇಶನನ್ನು ತಮ್ಮ ಮನೆಯಲ್ಲಿ ಕೂರಿಸಿ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. “ಸುಂದರವಾದ ಗಣೇಶ ಮೂರ್ತಿಯನ್ನು ತಯಾರಿಸಲು ಸುಲಭವಿದ್ದಾಗ ಏಕೆ ಖರೀದಿಸಬೇಕು? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ನಾಳಿನ ಆರೋಗ್ಯಕ್ಕಾಗಿ ಇಂದು ಪರಿಸರ ಸ್ನೇಹಿ ಗಣೇಶ ಬಳಸುವುದು ಉತ್ತಮ” ಎಂದು ಹಬ್ಬಕ್ಕೆ ವಿಶೇಷವಾಗಿ ವಿಶ್ ಮಾಡಿದ್ದಾರೆ.
Why buy? When it’s so easy to make these beautiful ganeshas.#LetsGoEcoFriendlyForABetterTomorrow
Happy Ganesh Chaturthi ????
On a lighter note , Which of the two Ganeshas is better? ???? pic.twitter.com/hGvCkRIBW3
— Vijayalakshmi darshan (@vijayaananth2) August 22, 2020
ಫೋಟೋದಲ್ಲಿ ದರ್ಶನ್ ಪತ್ನಿ ಮತ್ತು ಮಗ ವಿನೀಶ್ ಪ್ರತ್ಯೇಕವಾಗಿ ಎರಡು ಗಣೇಶನ ವಿಗ್ರಹ ತಯಾರಿಸಿದ್ದಾರೆ. ಈ ಎರಡರಲ್ಲಿ ಯಾವುದು ಚೆನ್ನಾಗಿದೆ ಎಂದು ವಿಜಯಲಕ್ಷ್ಮಿ ಅಭಿಮಾನಿಗಳಿಗೆ ತಮಾಷೆಯಾಗಿ ಪ್ರಶ್ನೆ ಕೇಳಿದ್ದಾರೆ.