ಪಾಟ್ನಾ: ಮಹಿಳೆಯೊಬ್ಬಳು ನವಜಾತ ಶಿಶುವಿಗೆ ಜನ್ಮ ನೀಡಿದ ಬಳಿಕ ಕಾಲೇಜಿಗೆ ತಲುಪಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಅಪರೂಪದ ಘಟನೆ ಬಿಹಾರದ ಮೋತಿಹರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯುವುದಕ್ಕಾಗಿ ಜಿಲ್ಲೆಯ ಡಿಟಿಪಿಎಸ್ ಪರೀಕ್ಷಾ ಕೇಂದ್ರಕ್ಕೆ ತಲುಪುವ ವೇಳೆ ಮಾರ್ಗ ಮಧ್ಯೆ ಕಾಜಲ್‍ಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಆಕೆಯ ಕುಟುಂಬ್ಥರು ಆಕೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.
Advertisement
Advertisement
ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಕಾಜಲ್ ಸ್ವಲ್ಪ ಚೇತರಿಸಿಕೊಂಡ ನಂತರ ಪರೀಕ್ಷಾ ಕೇಂದ್ರಕ್ಕೆ ತಲುಪಿ ಪ್ರತ್ಯೇಕ ಕೊಠಡಿಯಲ್ಲಿ ಕುಳಿತು ವಿಜ್ಞಾನ ಪರೀಕ್ಷೆಯನ್ನು ಬರೆದಿದ್ದಾರೆ.
Advertisement
ಕಾಜಲ್ ಬಾಲಾಕೋಟಿಯ ರಾಮ್‍ರೂಪ್ ಬಾಲ್‍ದೇವ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕಳೆದ ವರ್ಷ ಫೆಬ್ರವರಿಯಲ್ಲಿ ಘೋಡಶಾನ್ ಪೊಲೀಸ್ ಠಾಣಾ ವ್ಯಾಪ್ತಿಯ ನಿಮುಯಾ ಗ್ರಾಮದ ನಿವಾಸಿ ಚುಂಚುನ್ ಯಾದವ್ ಎಂಬವರನ್ನು ವಿವಾಹವಾಗಿದ್ದರು. ಮದುವೆಯ ನಂತರ ವಿದ್ಯಾಭ್ಯಾಸ ಮುಂದುವರಿಸಿದ ಕಾಜಲ್, ಇಂತಹ ಕಠಿಣ ಪರಿಸ್ಥಿತಿಯಲ್ಲಿಯೂ ಪರೀಕ್ಷೆ ಬರೆದಿದ್ದಾಳೆ ಎಂದು ಆಕೆಯ ಕುಟುಂಬಸ್ಥರು ತಿಳಿಸಿದ್ದಾರೆ.
Advertisement
ಅಲ್ಲದೆ ಮಗುವನ್ನು ವೆಂಟಿಲೇಟರ್‌ನಲ್ಲಿಇರಿಸಿ ಕಾಜಲ್ ತನ್ನ ಪರೀಕ್ಷೆಗೆ ಹಾಜರಾಗಿದ್ದಳು. ಪರೀಕ್ಷೆ ಬರೆಯಲು ಕೇಂದ್ರ ಇನ್ಸ್‌ಪೆಕ್ಟರ್ ಎಲ್ಲ ರೀತಿಯ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದರು ಎಂದು ಹೇಳಿದರು. ಸದ್ಯ ಮಹಿಳೆಗೆ ಓದಿನ ಬಗೆಗೆ ಇರುವ ಉತ್ಸಾಹವನ್ನು ಕಂಡು ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.