ಬೆಂಗಳೂರು: ಕಾಲೇಜಿನ ಕಟ್ಟಡದಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಬೆಂಗಳೂರು ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಾಲೇಜಿನ ವಿದ್ಯಾರ್ಥಿ.
ಮೂರನೇ ಸೆಮಿಸ್ಟಾರ್ ವಿದ್ಯಾರ್ಥಿಯಾಗಿರುವ ಜಯಂತ್ ರೆಡ್ಡಿ ಇಂದು ಕಳೆದ ವರ್ಷ ಬಾಕಿಯಾಗಿದ್ದ ಪರೀಕ್ಷೆ ಬರೆಯಲು ಬಂದಿದ್ದ. ಆದರೆ ಪರೀಕ್ಷೆಗೂ ಮುನ್ನ ಆತ ಡೆತ್ ನೋಟ್ ಬರೆದಿಟ್ಟು, ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ವಿವಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.