ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಡರಾತ್ರಿ ವಿಜಯಪುರ ಜಿಲ್ಲೆಯ ಬಬಲೇಶ್ವರ ಹಾಗೂ ನಿಡೋಣಿ ಗ್ರಾಮದ ಮಧ್ಯೆ ನಡೆದಿದೆ.
ಗುರುರಾಜ್ ಪಾಟೀಲ (27) ಹಾಗೂ ಅತಾಲಟ್ಟಿಯ ಅಪ್ಪು ಕಾರಿ(29) ಅಪಘಾತದಲ್ಲಿ ಮೃತ ದುರ್ದೈವಿಗಳು. ಮೃತರಿಬ್ಬರು ಬಬಲೇಶ್ವರ ನಿವಾಸಿಗಳಾಗಿದ್ದು, ನಿಡೋಣಿಗೆ ಕಾರಿನಲ್ಲಿ ಹೋಗುವಾಗ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಕಾರ್ ನಲ್ಲಿದ್ದ ಇನ್ನುಳಿದ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನ ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.