ವೀಡಿಯೋ: ಪವರ್ ಸ್ಟಾರ್‌ಗೆ ಕಲಬುರಗಿಯಲ್ಲಿ ಸಿಕ್ತು ಭರ್ಜರಿ ಸ್ವಾಗತ

Public TV
1 Min Read
GLB 8

ಕಲಬುರಗಿ: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇಂದು ಕಲಬುರಗಿಗೆ ಆಗಮಿಸಿದ್ದಾರೆ.

GLB PUNEETH 1

ಕನ್ನಡದ ಬಹುನಿರೀಕ್ಷಿತ ಚಿತ್ರ ‘ಯುವರತ್ನ’ ಸಿನಿಮಾದ ಪ್ರಚಾರಕ್ಕಾಗಿ ತಮ್ಮ ಚಿತ್ರತಂಡದೊಂದಿಗೆ ನಟ ಕಲಬುರಗಿಗೆ ಆಗಮಿಸಿದ್ದಾರೆ. ಪುನೀತ್ ಅವರು ಧನಂಜಯ್, ರವಿಶಂಕರ್ ಹಾಗೂ ಚಿತ್ರದ ನಿರ್ದೇಶಕ ಸಂತೋಷ್ ಆನಂದರಾಮ್ ಜೊತೆ ಪ್ರಸಿದ್ಧ ಶರಣಬಸವೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು.

GLB PUNEETH 3

ನಟ ದೇವಸ್ಥಾನದ ಆವರಣಕ್ಕೆ ಎಂಟ್ರಿಯಾಗುತ್ತಿದ್ದಂತೆಯೇ ಅವರಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಜೆಸಿಬಿ ಮೂಲಕ ಪುಷ್ಪವೃಷ್ಟಿ ಮಾಡಿ ತಮ್ಮ ನೆಚ್ಚಿನ ನಟನನ್ನು ನಗರದ ಜನತೆ ಬರಮಾಡಿಕೊಂಡಿದ್ದಾರೆ. ಅಲ್ಲದೆ ಅಪ್ಪು ಅಪ್ಪು ಎಂದು ಜೋರಾಗಿ ಕೂಗುತ್ತಾ ಜೈಕಾರ ಹಾಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *