ನವದೆಹಲಿ: ಭಾರತ ದೇಶವು ಪಾಕಿಸ್ತಾನಕ್ಕೆ 4.5 ಕೋಟಿ ಕೋವಿಡ್-19 ಲಸಿಕೆಯನ್ನು ರವಾನಿಸಲಿದೆ.
ಬಡ ದೇಶಗಳಿಗೆ ಆದ್ಯತೆಯ ಮೇಲೆ ಲಸಿಕೆ ಪೂರೈಸಲು ಜಾಗತಿಕ ಮಟ್ಟದಲ್ಲಿ ರಚಿಸಲಾಗಿರುವ ‘ಗವಿ’ (ಗ್ಲೋಬಲ್ ಅಲಯನ್ಸ್ ಫಾರ್ ವ್ಯಾಕ್ಸಿನೇಷನ್)ಯೋಜನೆಯಡಿ ಭಾರತ ಲಸಿಕೆ ಪೂರೈಸಲಿದ್ದು, ಪುಣೆಯ ಸೀರಂ ಇನ್‍ಸ್ಟಿಟ್ಯೂಟ್ ಉತ್ಪಾದಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ಪಾಕಿಸ್ತಾನಕ್ಕೆ ರವಾನಿಸಲಿದೆ.
ಜನವರಿ ಮದ್ಯದಲ್ಲಿ ಕೊರೊನಾ ವಿರುದ್ಧ ಲಸಿಕೆ ವಿತರಿಸುತ್ತಿರುವ ವಿಶ್ವದ ಅತಿದೊಡ್ಡ ದೇಶಗಳಲ್ಲಿ ಭಾರತ ಕೂಡ ಒಂದಾಗಿದ್ದು, ಈಗಾಗಲೇ ಭಾರತ ನರೆಹೊರೆಯ ಹಾಗೂ ಮಿತ್ರ ದೇಶಗಳಿಗೆ ಲಸಿಕೆಯನ್ನು ವಿತರಿಸಿದೆ. ಇದೀಗ ಸಂಕಷ್ಟದಲ್ಲಿರುವ ಪಾಕಿಸ್ತಾನಕ್ಕೂ ಲಸಿಕೆ ನೀಡುವ ಮೂಲಕ ನೆರವು ನೀಡಲಿದೆ.
ಕೊರೊನಾ ಲಸಿಕೆಗಾಗಿ ಪಾಕಿಸ್ತಾನ ಸರ್ಕಾರ ಸಂಪೂರ್ಣವಾಗಿ ಚೀನಾವನ್ನೇ ಅವಲಂಬಿಸಿತ್ತು. ಆದರೆ ಇದೀಗ ಪಾಕಿಸ್ತಾನದ ನಾಗರಿಕರು ಭಾರತದ ಲಸಿಕೆ ಮೇಲೆ ಹೆಚ್ಚು ವಿಶ್ವಾಸ ಹೊಂದಿರುವ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಹೀಗಾಗಿ ಉಭಯ ದೇಶಗಳು ಗಡಿಯಲ್ಲಿ ಕದನವಿರಾಮ ಉಲ್ಲಂಘನೆ ಮಾಡದಂತೆ ಮಾಡಿಕೊಂಡಿದ್ದ ಹಳೆಯ ಒಪ್ಪಂದವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ಧಾರಿಸಿದ್ದರಿಂದ ಈ ವಿಚಾರ ಬೆಳಕಿಗೆ ಬಂದಿದೆ.
ಈ ಮುನ್ನ ಲೋಕಸಭೆಯಲ್ಲಿ ಭಾರತಕ್ಕೆ ಈವರೆಗೂ ಕೋವಿಡ್-19 ಲಸಿಕೆ ಪೂರೈಸುವಂತೆ 22 ದೇಶಗಳು ಮನವಿ ಸಲ್ಲಿಸಿತ್ತು. ಈಗಾಗಲೇ 15 ದೇಶಗಳಿಗೆ ಒಪ್ಪಂದದ ಆಧಾರದ ಮೇಲೆ ಲಸಿಕೆ ಕಳುಹಿಸಿಕೊಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದರು.