ಮಂಗಳೂರು: ಪಾಕ್ ಪರ ಘೋಷಣೆ ಕೂಗಿರುವ ಆರೋಪದ ಮೇಲೆ ಆರು ಮಂದಿ ಎಸ್‍ಡಿಪಿಐ ಕಾರ್ಯಕರ್ತರನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮತ ಎಣಿಕೆ ಕೇಂದ್ರದ ಬಳಿ ಸೇರಿದ್ದ ರಾಜಕೀಯ ಪಕ್ಷಗಳ ಕಾರ್ಯಕರ್ತರು ಫಲಿತಾಂಶ ಹೊರಬರುತ್ತಿದ್ದಂತೆ ಘೋಷಣೆಗಳನ್ನು ಕೂಗುತ್ತಿದ್ದರು. ಈ ಸಂದರ್ಭ ಸ್ಥಳದಲ್ಲಿದ್ದ ಇಬ್ಬರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ಕೇಳಿಬಂದಿದೆ. ಇದರಿಂದ ಕೆಳ ಹೊತ್ತು ಆತಂಕದ ಸನ್ನಿವೇಶ ಸೃಷ್ಟಿಯಾಗಿತ್ತು.
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ದೃಶ್ಯಾವಳಿಗಳನ್ನು ಫಾರೆನ್ಸಿಕ್ ಲ್ಯಾಬ್‍ಗೆ ರವಾನಿಸಿರುವ ಪೊಲೀಸರು, ಈಗಾಗಲೇ ಆರು ಮಂದಿ ಎಸ್‍ಡಿಪಿಐ ಕಾರ್ಯಕರ್ತರನ್ನು ವಶಪಡಿಸಿಕೊಂಡು ತ್ರೀವ ವಿಚಾರಣೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಹಳ್ಳಿ ಪಾಲಿಟಿಕ್ಸ್‍ನಲ್ಲಿ ಗೆದ್ದ ಖುಷಿಯಲ್ಲಿ ಕೆಲ ಕಿಡಿಗೇಡಿಗಳು ಪಾಕ್ ಪರ ಘೋಷಣೆ ಕೂಗಿದ್ದರು. ಮತ ಎಣಿಕಾ ಕೇಂದ್ರದ ಮುಂದೆ ಎಸ್‍ಡಿಪಿಐ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿತ್ತು. ಇದರಿಂದ ಎಚ್ಚೆತ್ತ ಬೆಳ್ತಂಗಡಿ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿಕೊಂಡು, ಪಾಕ್ ಪರ ಘೋಷಣೆ ಕೂಗಿದವರ ಪತ್ತೆಗೆ ಕ್ರಮ ತೆಗೆದುಕೊಂಡಿದ್ದರು.