ನವದೆಹಲಿ: ಕೇಂದ್ರ ಸರ್ಕಾರದ ಹೊಸ ಅನ್‌ಲಾಕ್ 4 ಮಾರ್ಗಸೂಚಿಯಲ್ಲಿ ಶಾಲೆ ತೆರೆಯಲು ಅನುಮತಿ ನೀಡಿಲ್ಲ. ಆದರೆ ಪೋಷಕರ ಒಪ್ಪಿಗೆ ಪಡೆದು ಶಾಲೆಗೆ ತೆರಳಿ ಮಾರ್ಗದರ್ಶನ ಪಡೆಯಲು ಅನುಮತಿ ಸಿಕ್ಕಿದೆ.
ಸೆಪ್ಟೆಂಬರ್ 21ರಿಂದ ಕಂಟೈನ್ಮೆಂಟ್ ಪ್ರದೇಶದ ಹೊರಗಡೆ ಇರುವ ಪ್ರದೇಶದಲ್ಲಿರುವ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಆನ್‌ಲೈನ್ ಕ್ಲಾಸ್ ವೇಳೆ ಶಾಲೆಗಳಿಗೆ ತೆರಳಿ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು ಅನುಮತಿ ನೀಡಲಾಗಿದೆ. ಈ ರೀತಿ ಮಾರ್ಗದರ್ಶನ ಪಡೆಯಲು ಪೋಷಕರ ಅನುಮತಿ ಕಡ್ಡಾಯ ಎಂದು ಸೂಚಿಸಲಾಗಿದೆ.
Advertisement
Advertisement
ಈ ವೇಳೆ ಶೇ.50ರಷ್ಟು ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಆನ್‌ಲೈನ್ ತರಗತಿಗಾಗಿ ಶಾಲೆಗೆ ಬಂದು ಪಾಠ ಮಾಡಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕೆಂದು ಸೂಚಿಸಿದೆ. ಇದನ್ನೂ ಓದಿ: ಇನ್ನು ಮುಂದೆ ಸಮಾರಂಭಗಳಲ್ಲಿ 100 ಜನ ಭಾಗವಹಿಸಬಹುದು
Advertisement
ಸೆ.21ರಿಂದ ಸ್ನಾತಕೋತ್ತರ ಮತ್ತು ಪಿಎಚ್‌ಡಿ ವಿದ್ಯಾರ್ಥಿಗಳು ಪ್ರಯೋಗಾಲಯ ಬಳಸಬಹುದು ಮತ್ತು ಶೈಕ್ಷಣಿಕ ಚಟುವಟಿಕೆ ಆರಂಭಿಸಬಹುದು ಎಂದು ಹೇಳಿದೆ.
Advertisement
ಪರಿಸ್ಥಿತಿಯನ್ನು ನೋಡಿಕೊಂಡು ಉನ್ನತ ಶಿಕ್ಷಣ ಇಲಾಖೆ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಬಹುದಾಗಿದೆ ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.