ಬೆಂಗಳೂರು: ಪಾದರಾಯನಪುರಲ್ಲಿ ಪೊಲೀಸರ ಮೇಲೆ ಹಲ್ಲೆ ಎಸೆಗಿದ್ದ ಪ್ರಕರಣದ ಎಲ್ಲಾ 126 ಆರೋಪಿಗಳಿಗೂ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಎಲ್ಲ ಆರೋಪಿಗಳಿಗೂ ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆ ನಡೆಸಬೇಕು. ಒಂದು ವೇಳೆ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಬಂದರೆ ಸರ್ಕಾರದ ನಿಯಮದಂತೆ ಕ್ರಮ ಕೈಗೊಳ್ಳಬೇಕು. ಅಷ್ಟೇ ಅಲ್ಲದೆ ಎಲ್ಲರೂ ಕೋವಿಡ್-19 ಮಾರ್ಗಸೂಚಿ ಪಾಲಿಸಬೇಕು. ಇಲ್ಲವಾದರೆ ಜಾಮೀನು ರದ್ದುಗೊಳ್ಳುವುದಾಗಿ ಹೈಕೋರ್ಟ್ ಷರತ್ತು ವಿಧಿಸಿದೆ.
Advertisement
Advertisement
ಆರೋಪಿಗಳು 1 ಲಕ್ಷ ರೂ. ಬಾಂಡ್, ಶ್ಯೂರಿಟಿ ಒದಗಿಸಬೇಕು ಎಂದು ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದ ನ್ಯಾಯಪೀಠವು ಆದೇಶ ಹೊರಡಿಸಿದೆ.
Advertisement
ಏನಿದು ಪ್ರಕರಣ:
ಪಾದರಾಯನಪುರದಲ್ಲಿ ಚೆಕ್ ಪೋಸ್ಟ್ ನಾಶ ಮಾಡಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಬೆಂಗಳೂರಿನಲ್ಲೇ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಇರ್ಫಾನ್‍ನನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದರು.
Advertisement
ಆರೋಪಿಗಳ ಪರ ವಕೀಲ ಇಸ್ಮಾಯಿಲ್ ಜಬೀವುಲ್ಲಾ ಅವರು ಕಕ್ಷಿದಾರರಿಗೆ ಜಾಮೀನು ನೀಡುವಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕುರಿತು ವಿಚಾರಣೆ ನಡೆಸಿ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇರ್ಫಾನ್ ಯಾರು?:
ಕೆಎಫ್‍ಡಿಯ ಇರ್ಫಾನ್ ಕೇವಲ ಕೆಎಫ್‍ಡಿನಲ್ಲಿ ಇರಲಿಲ್ಲ. ಕಳೆದ ಬಾರಿ ಎಸ್‍ಡಿಪಿಐಯಿಂದ ಕಾರ್ಪೋರೇಷನ್ ಎಲೆಕ್ಷನ್‍ಗೆ ನಿಂತು ಸೋತಿದ್ದ. ಈ ಮೂಲಕ ಎಸ್‍ಡಿಪಿಐನಲ್ಲಿ ಕೂಡ ಗುರುತಿಸಿಕೊಂಡಿದ್ದ. ಹಾಲಿ ಕಾರ್ಫೊರೇಟರ್ ಇಮ್ರಾನ್ ಪಾಷಾ ವಿರುದ್ಧ ತೊಡೆ ತಟ್ಟೋದೆ ಈತನ ಉದ್ದೇಶವಾಗಿತ್ತು.